ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿಯೊಂದಿಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅಂತಾರಾಷ್ಟ್ರೀಯ ವೃತ್ತಿಜೀವನ ಕೊನೆಗೊಳ್ಳುವ ಸಾಧ್ಯತೆಯಿದೆ ಎಂದು ವರದಿಯೊಂದು ಭಾನುವಾರ ತಿಳಿಸಿದೆ.
ಈ ವರ್ಷದ ಆರಂಭದಲ್ಲಿ ಕೊಹ್ಲಿ ಮತ್ತು ರೋಹಿತ್ ಟೆಸ್ಟ್ ಕ್ರಿಕೆಟ್‌ಗೆ ಅಚ್ಚರಿ ರೀತಿಯಲ್ಲಿ ನಿವೃತ್ತಿ ಘೋಷಿಸಿದ್ದರು. ಭಾರತ T20 ವಿಶ್ವಕಪ್ ಗೆಲುವಿನ ನಂತರ ಕಳೆದ ವರ್ಷ T20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿದ್ದ ಅವರು ಈಗ ದೇಶಕ್ಕಾಗಿ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ.
ಮುಂದಿನ ಅಕ್ಟೋಬರ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಪ್ರವಾಸದ ವೇಳೆಯಲ್ಲಿ ಏಕದಿನ ಕ್ರಿಕೆಟಿಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.
ಆದಾಗ್ಯೂ, ಇವರಿಬ್ಬರು ಈ ವರ್ಷದ ಕೊನೆಯಲ್ಲಿ ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸುವಂತೆ ಕಾಣಿಸುತ್ತಿದೆ. ಆಗಲೇ ಏಕದಿನ ಕ್ರಿಕೆಟಿಗೂ ವಿದಾಯ ಹೇಳಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. ಕೊಹ್ಲಿ ಮತ್ತು ರೋಹಿತ್ ಆಸ್ಟ್ರೇಲಿಯಾ ಪ್ರವಾಸ ಮುಗಿದ ನಂತರವೂ ಮುಂದುವರೆದರೆ, ಡಿಸೆಂಬರ್ ನಲ್ಲಿ ನಡೆಯಲಿರುವ ವಿಜಯ್ ಹಜಾರೆ ಏಕದಿನ ಪಂದ್ಯಾವಳಿಯಲ್ಲಿ ತಮ್ಮ ರಾಜ್ಯಗಳ ತಂಡಗಳಲ್ಲಿ ಭಾಗವಹಿಸಬೇಕಾಗುತ್ತದೆ.
ಈ ಪರಿಸ್ಥಿತಿಯಿಂದಾಗಿ ಅವರು ಆಸ್ಟ್ರೇಲಿಯಾ ಪ್ರವಾಸದ ಮೊದಲು ತಮ್ಮ ಅಂತರರಾಷ್ಟ್ರೀಯ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ' ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ದೈನಿಕ್ ಜಾಗರಣ್ ವರದಿ ಮಾಡಿದೆ. ಹಲವು ಯುವ ಆಟಗಾರರು ಭಾರತೀಯ ಏಕದಿನ ತಂಡದಲ್ಲಿ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ. 2027 ರ ಏಕದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಮ್ಯಾನೇಜ್ ಮೆಂಟ್ ಮತ್ತು ಆಯ್ಕೆದಾರರು ಅವರತ್ತ ವಾಲುತ್ತಿದ್ದಾರೆ ಎನ್ನಲಾಗಿದೆ.