ಅಜಿಂಕ್ಯ ರಹಾನೆ 
ಕ್ರಿಕೆಟ್

ಮುಂಬೈ ತಂಡದ ನಾಯಕ ಸ್ಥಾನ ತೊರೆದ ಅಜಿಂಕ್ಯ ರಹಾನೆ! ಕಾರಣವೇನು?

ಮುಂಬರುವ ದೇಶೀಯ ಋತುವಿಗಾಗಿ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲು ಇದು ಸಕಾಲ ಎಂದು ಭಾವಿಸುತ್ತೇನೆ.

ಮುಂಬೈ: ಮುಂಬರುವ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಅನುಭವಿ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಮುಂಬೈ ತಂಡದ ನಾಯಕತ್ವವನ್ನು ತೊರೆದಿದ್ದಾರೆ. ಮುಂಬೈ ತಂಡದ ಸಾಮಾನ್ಯ ಆಟಗಾರನಾಗಿ ಮುಂದುವರೆಯುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಅವರ ನಾಯಕತ್ವದಲ್ಲಿ ಮುಂಬೈ ತಂಡ 2023-24ರಲ್ಲಿ ರಣಜಿ ಟ್ರೋಫಿ ಗೆದ್ದಿತ್ತು. ಅಲ್ಲದೇ ಕಳೆದ ವರ್ಷ 2024-25 ಇರಾನ್ ಕಪ್ ಕೂಡಾ ಮುಡಿಗೇರಿಸಿಕೊಂಡಿತ್ತು. ಅವರ ನಾಯಕತ್ವದಡಿ 2022-23ರಲ್ಲಿ ಸಯ್ಯದ್ ಮುಸ್ತಾಕ್ ಅಲಿ ಟಿ-20 ಪಂದ್ಯಾವಳಿಯನ್ನು ಕೂಡಾ ಮುಂಬೈ ತಂಡ ಗೆದ್ದುಕೊಂಡಿತ್ತು.

ಮುಂಬರುವ ದೇಶೀಯ ಋತುವಿಗಾಗಿ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲು ಇದು ಸಕಾಲ ಎಂದು ಭಾವಿಸುತ್ತೇನೆ. ಆದ್ದರಿಂದ ಮುಂಬೈ ನಾಯಕತ್ವದಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದೇನೆ ಎಂದು ಅವರು ರಹಾನೆ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮುಂಬೈ ತಂಡದ ನಾಯಕನಾಗಿ ಹಲವು ಟ್ರೋಫಿಗಳನ್ನು ಗೆದ್ದಿರುವುದು ನನ್ನಗೆ ಸಿಕ್ಕ ಗೌರವವಾಗಿದೆ. ಮುಂಬರುವ ಟೂರ್ನಿಯಲ್ಲಿ ಹೊಸಬರು ನಾಯಕತ್ವ ವಹಿಸಲು ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ನಾಯಕತ್ವದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಸಾಮಾನ್ಯ ಆಟಗಾರನಾಗಿ ಅತ್ಯುತ್ತಮ ಆಟ ಆಡಲು ಸಂಪೂರ್ಣ ಬದ್ಧನಾಗಿರುತ್ತೇನೆ. ಮತ್ತಷ್ಟು ಟ್ರೋಫಿ ಗೆಲ್ಲಲು ಮುಂಬೈ ತಂಡದೊಂದಿಗೆ ಮುಂದುವರೆಯುತ್ತೇನೆ ಎಂದು ರಹಾನೆ ಬರೆದುಕೊಂಡಿದ್ದಾರೆ.

37 ವರ್ಷದ ಅಜಿಂಕ್ಯಾ ರಹಾನೆ 201 ಪ್ರಥಮ ದರ್ಜೆಯ ಪಂದ್ಯಗಳನ್ನಾಡಿದ್ದಾರೆ. ಅಜಿಂಕ್ಯ ರಹಾನೆ ಇದುವರೆಗೆ ಮುಂಬೈ ಪರ 76 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 52ರ ಸರಾಸರಿಯಲ್ಲಿ 5932 ರನ್ ಗಳಿಸಿದ್ದಾರೆ. 19 ಶತಕ ಸಿಡಿಸಿದ್ದಾರೆ. ವಾಸಿಮ್ ಜಾಫರ್ ನಂತರ ಮುಂಬೈ ಪರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ಮುಂಬೈ ತಂಡಕ್ಕೆ ಮುಂದಿನ ನಾಯಕ ಯಾರು?: ಮುಂಬೈ ತಂಡದಲ್ಲಿ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್ ಮತ್ತು ಸರ್ಫರಾಜ್ ಖಾನ್ ಅವರಂತಹ ಅನುಭವಿ ಆಟಗಾರರಿದ್ದಾರೆ. ಅಯ್ಯರ್ ಮತ್ತು ಸೂರ್ಯಕುಮಾರ್ ಇಬ್ಬರೂ ಮುಂಬೈ ನಾಯಕತ್ವದ ರೇಸ್​ಗೆ ಪ್ರಬಲ ಸ್ಪರ್ಧಿಗಳಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT