ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ(KSCA) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ಪದಾಧಿಕಾರಿಗಳ ತಂಡ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬೆಳಗಾವಿಯಲ್ಲಿ ಭೇಟಿ ಮಾಡಿತು. 
ಕ್ರಿಕೆಟ್

ಕ್ರಿಕೆಟ್ ಅಭಿಮಾನಿಗಳಿಗೆ ಡಿಕೆಶಿ ಗುಡ್ ನ್ಯೂಸ್; ಮತ್ತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್

ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಜನಸಂದಣಿ ನಿರ್ವಹಣೆ ಮತ್ತು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿಯ ಶಿಫಾರಸುಗಳನ್ನು ಪಾಲಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ.

ಬೆಳಗಾವಿ: 11 ಜನರನ್ನು ಬಲಿ ಪಡೆದ ಜೂನ್ 4ರ ಕಾಲ್ತುಳಿತ ಘಟನೆಯ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಎಲ್ಲ ರೀತಿಯ ಪಂದ್ಯಗಳಿಂದ ದೂರ ಉಳಿದಿದ್ದು, ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕ್ರಿಕೆಟ್ ಅಭಿಮಾನಿಗಳಿಗೆ ಬುಧವಾರ ಗುಡ್ ನ್ಯೂಸ್ ನೀಡಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಇತರೆ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಡಿಸಿಎಂ, ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ(KSCA) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ಪದಾಧಿಕಾರಿಗಳ ತಂಡ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬೆಳಗಾವಿಯಲ್ಲಿ ಭೇಟಿ ಮಾಡಿ, ಪಂದ್ಯಗಳ ಆಯೋಜನೆಗೆ ಸಹಕಾರ ಮತ್ತು ಅನುಮತಿ ಕೋರಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ವೆಂಕಟೇಶ್ ಪ್ರಸಾದ್ ಹಾಗೂ ತಂಡಕ್ಕೆ ಸರ್ಕಾರ ಅಭಿನಂದನೆ ಸಲ್ಲಿಸಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆ ಕುರಿತು, ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಜನಸಂದಣಿ ನಿರ್ವಹಣೆ ಮತ್ತು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿಯ ಶಿಫಾರಸುಗಳನ್ನು ಪಾಲಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ.

ವೆಂಕಟೇಶ್ ಪ್ರಸಾದ್ ತಂಡವು ಮೈಕೆಲ್ ಕುನ್ಹಾ ಸಮಿತಿ ವರದಿಯನ್ನು ಪಾಲಿಸುವುದಾಗಿ ಭರವಸೆ ನೀಡಿದೆ. ಬೆಂಗಳೂರಿನಿಂದ ಯಾವುದೇ ಪಂದ್ಯಗಳನ್ನು ಹೊರಗೆ ಕಳುಹಿಸುವ ಇಚ್ಛೆ ಸರ್ಕಾರಕ್ಕಿಲ್ಲ ಎಂದು ಡಿಕೆಶಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜಕೀಯ ದಂಗೆ, ಶೇಖ್ ಹಸೀನಾ ನಿರ್ಗಮನ ಬಳಿಕ ಇಂದು ಬಾಂಗ್ಲಾದೇಶ ಚುನಾವಣೆ: 51 ಪಕ್ಷಗಳು ಕಣದಲ್ಲಿ, ಭವಿಷ್ಯ ನಿರ್ಧರಿಸುತ್ತಾರೆಯೇ Gen-Z ?

ವಿಧಾನಸೌಧಕ್ಕೆ ಚಿನ್ನ-ಹಣ ಬಂದಿದ್ದು ಹೇಗೆ..? ತನಿಖೆಗೆ ರಾಜ್ಯ ಸರ್ಕಾರ ಆದೇಶ

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

ಟಿ20 ವಿಶ್ವಕಪ್ 2026: ಆಫ್ಘಾನಿಸ್ತಾನ ಬೆಂಬಿಡದ super Over ಭೂತ, ಇತಿಹಾಸ ಹೇಳೋದೇನು? 3 ಸೂಪರ್ ಓವರ್ ಕಂಡಿದ್ದ ಆ ಪಂದ್ಯ!

Dr Sreeleela: ನಟನೆ ಜೊತೆಗೇ MBBS ಪದವಿ ಪಡೆದ ಶ್ರೀಲೀಲಾ, ಪೋಷಕರ ತಬ್ಬಿ ಆನಂದ ಭಾಷ್ಮ! Video

SCROLL FOR NEXT