ಅಹ್ಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ 5ನೇ ಟಿ20 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 30 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಭಾರತ ಸರಣಿಯಲ್ಲಿ 3-1 ಅಂತರದಿಂದ ಸರಣಿ ಗೆದ್ದಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡಕ್ಕೆ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 232 ರನ್ ಟಾರ್ಗೆಟ್ ನೀಡಿತ್ತು. ಆರಂಭಿಕ ಆಟಗಾರರಾದ ಸಂಜು ಸ್ಯಾಮ್ಸನ್ 22 ಎಸೆತಗಳಲ್ಲಿ 37 ರನ್, ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 34 ರನ್ ಗಳಿಸಿದರು. ತಿಲಕ್ ವರ್ಮಾ 42 ಎಸೆತಗಳಲ್ಲಿ 73 ರನ್ ಹಾಗೂ ಹಾರ್ದಿಕ್ ಪಾಂಡ್ಯ 25 ಎಸೆತಗಳಲ್ಲಿ 63 ರನ್ ಗಳಿಸುವ ಮೂಲಕ ತಂಡ ಹೆಚ್ಚಿನ ಸ್ಕೋರ್ ಗಳಿಸಲು ನೆರವಾದರು.
232 ರನ್ ಟಾರ್ಗೆಟ್ ಚೇಸಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ, 20 ಒವರ್ ಗಳಿಗೆ 8 ವಿಕೆಟ್ ಕಳೆದುಕೊಂಡು 201 ರನ್ ಗಳಿಸಿ 30 ರನ್ ಗಳ ಅಂತರದ ಸೋಲೊಪ್ಪಿಕೊಂಡಿತು. ವರುಣ್ ಚಕ್ರವರ್ತಿ 4 ವಿಕೆಟ್ ಮತ್ತು ಜಸ್ಪ್ರೀತ್ ಬುಮ್ರಾ 2 ವಿಕೆಟ್ ಗಳಿಸಿ ಬೌಲಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾವನ್ನು ಕಟ್ಟಿಹಾಕಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.