ಮುಂಬೈ: ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿರುವ ಟಿ-20 ವಿಶ್ವಕಪ್ ಗಾಗಿ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಫಾರ್ಮ್ ನಲ್ಲಿ ಇಲ್ಲದ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಈ ಟೂರ್ನಿಗೆ ಅಕ್ಷರ್ ಪಟೇಲ್ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿನ ಅತ್ಯುತ್ತಮ ಪ್ರದರ್ಶನದಿಂದ ಇಶಾನ್ ಕಿಶಾನ್ ಕಂಬ್ಯಾಕ್ ಆಗಿದ್ದಾರೆ. ಇದೇ ತಂಡ ಜನವರಿ 21 ರಿಂದ 31 ರವರೆಗೆ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಆಡಲಿದೆ ಎಂದು ಬಿಸಿಸಿಐ ತಿಳಿಸಿದೆ.
ಇಲ್ಲಿನ ಪ್ರಧಾನ ಕಚೇರಿಯಲ್ಲಿ ಬಿಸಿಸಿಐ ಹಿರಿಯ ಆಯ್ಕೆದಾರರ ಸಮಿತಿ ಸಭೆ ನಂತರ ತಂಡವನ್ನು ಅಂತಿಮಗೊಳಿಸಲಾಯಿತು. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸುದ್ದಿಗೋಷ್ಠಿಯಲ್ಲಿ ತಂಡವನ್ನು ಪ್ರಕಟಿಸಿದರು.
ನಂತರ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಇವರಿಬ್ಬರು ಮುಂಬರುವ ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ T20I ಸರಣಿಗಾಗಿ ಭಾರತದ ಉದ್ದೇಶಗಳನ್ನು ವಿವರಿಸಿದರು.
ಟಿ-20 ಮಾದರಿಯಲ್ಲಿ ಕಳಪೆ ಪ್ರದರ್ಶನಕ್ಕೆ ಗಿಲ್ ಬೆಲೆ ತೆತ್ತಿದ್ದಾರೆ. ಹಿಂದೊಮ್ಮೆ T20I ಗಳಲ್ಲಿ ಭಾರತದ ಉಪನಾಯಕರಾಗಿದ್ದ ಅವರು ಕ್ರಮೇಣ ತಂಡದ ಆಯ್ಕೆದಾರರ ವಿಶ್ವಾಸವನ್ನು ಕಳೆದುಕೊಂಡರು. ಈ ವರ್ಷ ಕಳಪೆ ಪ್ರದರ್ಶನಕ್ಕಾಗಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದರು. 15 ಪಂದ್ಯಗಳಿಂದ 24.25 ಸರಾಸರಿಯಲ್ಲಿ 137.26 ಸ್ಟ್ರೈಕ್ ರೇಟ್‌ನಲ್ಲಿ ಕೇವಲ 291 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ ಒಂದು ಅರ್ಧಶತಕವನ್ನು ದಾಖಲಿಸಿಲ್ಲ. ಗಾಯದ ಸಮಸ್ಯೆಗಳಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಎರಡು T20 ಅಂತಾರಾಷ್ಟ್ರೀಯ ಪಂದ್ಯಗಳನ್ನು ತಪ್ಪಿಸಿಕೊಂಡರು.
ಟಿ20 ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗಾಗಿ ಭಾರತ ತಂಡ ಇಂತಿದೆ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ (ಉಪನಾಯಕ), ರಿಂಕು ಸಿಂಗ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಕಿಶಾನ್ದರ್