ಅಭಿಷೇಕ್ ಶರ್ಮಾ ವಿಶ್ವದಾಖಲೆ 
ಕ್ರಿಕೆಟ್

5th T20: ಭಾರತದ ಪರ ಗರಿಷ್ಠ ಸ್ಕೋರ್, ಗರಿಷ್ಠ ಸಿಕ್ಸರ್; ರೋಹಿತ್, ಗಿಲ್ ದಾಖಲೆ ಮುರಿದ Abhishek Sharma

ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ಧ 135 ರನ್ ಗಳಿಸಿದ್ದು, ಇದು ಭಾರತದ ಪರ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ದಾಖಲಾದ ಬ್ಯಾಟರ್ ಒಬ್ಬರ ವೈಯುಕ್ತಿಕ ಗರಿಷ್ಠ ಸ್ಕೋರ್ ಆಗಿದೆ.

ಮುಂಬೈ: ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತದ ಅಭಿಷೇಕ್ ಶರ್ಮಾ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಿಸಿದ್ದು ಮಾತ್ರವಲ್ಲದೇ ಭಾರತದ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ದಾಖಲೆಗಳನ್ನು ಮುರಿದಿದ್ದಾರೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 5ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ ಕೇವಲ 37 ಎಸೆತಗಳಲ್ಲಿ ಶತಕ ಸಿಡಿಸಿದರು. ಅವರ ಈ ಅದ್ಭುತ ಇನ್ನಿಂಗ್ಸ್ ನಲ್ಲಿ ಬರೊಬ್ಬರಿ 11 ಇನ್ನಿಂಗ್ಸ್ ಮತ್ತು 7 ಬೌಂಡರಿಗಳು ಸೇರಿವೆ.

ಟಿ20ಯಲ್ಲಿ ಭಾರತದ ಪರ ಗರಿಷ್ಟ ಸ್ಕೋರ್

ಇಂದು ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ಧ 135 ರನ್ ಗಳಿಸಿದ್ದು, ಇದು ಭಾರತದ ಪರ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ದಾಖಲಾದ ಬ್ಯಾಟರ್ ಒಬ್ಬರ ವೈಯುಕ್ತಿಕ ಗರಿಷ್ಠ ಸ್ಕೋರ್ ಆಗಿದೆ. ಈ ಹಿಂದೆ 2023ರಲ್ಲಿ ನ್ಯೂಜಿಲೆಂಡ್ ವಿರುದ್ಧ ಅಹ್ಮದಾಬಾದ್ ನಲ್ಲಿ ಶುಭ್ ಮನ್ ಗಿಲ್ ಅಜೇಯ 126ರನ್ ಗಳಿಸಿದ್ದರು. ಇದು ಈವರೆಗೂ ಭಾರತದ ಪರ ದಾಖಲಾಗಿದ್ದ ಟಿ20 ಪಂದ್ಯದ ವೈಯುಕ್ತಿಕ ಗರಿಷ್ಠ ಸ್ಕೋರ್ ಆಗಿತ್ತು.

Highest individual scores for India in T20Is

  • 135 Abhishek Sharma vs Eng Wankhede 2025

  • 126* Shubman Gill vs NZ Ahmedabad 2023

  • 123* Ruturaj Gaikwad vs Aus Guwahati 2023

  • 122* Virat Kohli vs Afg Dubai 2022

  • 121* Rohit Sharma vs Afg Bengaluru 2024

ಗರಿಷ್ಠ ಸಿಕ್ಸರ್

ಇಂದಿನ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ಧ ಒಟ್ಟು 13 ಸಿಕ್ಸರ್ ಗಳನ್ನು ಸಿಡಿಸಿದ್ದು, ಇದು ಭಾರತದ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯದಲ್ಲಿ ಬ್ಯಾಟರ್ ಓರ್ವ ಸಿಡಿಸಿದ ಗರಿಷ್ಠ ಸಿಕ್ಸರ್ ಗಳಾಗಿವೆ. ಇದಕ್ಕೂ ಮೊದಲು ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ 2017ರಲ್ಲಿ ಶ್ರೀಲಂಕಾ ವಿರುದ್ಧ ಇಂದೋರ್ ಮೈದಾನದಲ್ಲಿ 10 ಸಿಕ್ಸರ್ ಸಿಡಿಸಿದ್ದರು. ಅಂತೆಯೇ 2024ರಲ್ಲಿ ಡರ್ಬನ್ ನಲ್ಲಿ ಸಂಜು ಸ್ಯಾಮ್ಸನ್ ಮತ್ತು 2024ರಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ಇದೇ ದಕ್ಷಿಣ ಆಫ್ರಿಕಾ ವಿರುದ್ಧ ತಿಲಕ್ ವರ್ಮಾ ಕೂಡ ತಲಾ ಸಿಕ್ಸರ್ ಗಳನ್ನು ಸಿಡಿಸಿದ್ದರು.

Most sixes for India in a T20I

  • 13 Abhishek Sharma vs Eng Wankhede 2025

  • 10 Rohit Sharma vs SL Indore 2017

  • 10 Sanju Samson vs SA Durban 2024

  • 10 Tilak Varma vs SA Joburg 2024

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT