ಶ್ರೇಯಸ್ ಅಯ್ಯರ್ 
ಕ್ರಿಕೆಟ್

1st ODI: Shreyas Iyer ಭರ್ಜರಿ ಕಮ್ ಬ್ಯಾಕ್, ಆಂಗ್ಲರ ವಿರುದ್ಧ ದಾಖಲೆಯ ಅರ್ಧಶತಕ

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿರುವ 249ರನ್ ಗಳನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ನೆರವಾದರು.

ನಾಗ್ಪುರ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿರುವ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾಗೆ ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, ಆಂಗ್ಲರ ವಿರುದ್ಧ ದಾಖಲೆಯ ಅರ್ಧಶತಕ ಸಿಡಿಸುವ ಮೂಲಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಹೌದು.. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿರುವ 249ರನ್ ಗಳನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ನೆರವಾದರು. ನಾಗ್ಪುರ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಕೇವಲ 36 ಎಸೆತಗಳಲ್ಲಿ 163.89 ಸ್ಟ್ರೈಕ್ ರೇಟ್‌ನಲ್ಲಿ 59 ರನ್ ಗಳಿಸಿ ಔಟಾದರು. ಅವರ ಈ ಭರ್ಜರಿ ಇನ್ನಿಂಗ್ಸ್ ನಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು.

ದಾಖಲೆಯ ಅರ್ಧಶತಕ

ಇನ್ನು ಇದೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಆ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ತಮ್ಮ 2ನೇ ವೇಗದ ಅರ್ಧಶತಕ ಗಳಿಸಿದರು. ಈ ಹಿಂದೆ ಶ್ರೇಯಸ್ ಅಯ್ಯರ್ 2019ರಲ್ಲಿ ವಿಶಾಖಪಟ್ಟಣಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಪಂದ್ಯದಲ್ಲಿ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಆ ಮೂಲಕ ಇಂದು ತಮ್ಮ 2ನೇ ವೇಗದ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದರು.

ಇನ್ನು ಈ ಪಂದ್ಯದಲ್ಲಿ ಭಾರತದ ಪರ ಅಕ್ಸರ್ ಪಟೇಲ್ ಕೂಡ ಅರ್ಧಶತಕ ಸಿಡಿಸಿ ಶ್ರೇಯಸ್ ಅಯ್ಯರ್ ಗೆ ಉತ್ತಮ ಸಾಥ್ ನೀಡಿದರು. ಅಕ್ಸರ್ ಪಟೇಲ್ ಒಟ್ಟು 47 ಎಸೆತಗಳನ್ನು ಎದುರಿಸಿ 1 ಸಿಕ್ಸರ್ ಮತ್ತು 6 ಬೌಂಡರಿ ಸಹಿತ 110.64 ಸ್ಟ್ರೈಕ್ ರೇಟ್ ನಲ್ಲಿ 52 ರನ್ ಕಲೆಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT