ನಾಗ್ಪುರ: ಗುರುವಾರ ಇಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮೊಣಕಾಲಿನ ನೋವಿನ ಕಾರಣದಿಂದಾಗಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪಂದ್ಯದಿಂದ ಹೊರಗುಳಿದಿದ್ದು, ನವೆಂಬರ್ 19 ರಂದು ಆಸ್ಟ್ರೇಲಿಯಾ ವಿರುದ್ಧದ ಭಾರತದ ವಿಶ್ವಕಪ್ ಫೈನಲ್ ಪಂದ್ಯದ ನಂತರ ಇದೇ ಮೊದಲ ಬಾರಿಗೆ ವೇಗಿ ಮೊಹಮ್ಮದ್ ಶಮಿ ಏಕದಿನ ಮಾದರಿಗೆ ಮರಳಿದ್ದಾರೆ.
ಟೂರ್ನಮೆಂಟ್‌ನಲ್ಲಿ ಭಾರತದ ಪರ ಪ್ರಮುಖ ವಿಕೆಟ್ ಟೇಕರ್ (24) ಆಗಿದ್ದ ಶಮಿ, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡಿದ್ದರು. ಇತ್ತೀಚೆಗೆ ನಡೆದ ಸರಣಿಯಲ್ಲಿ ಭಾರತವು 4-1 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿತ್ತು.
ರೋಹಿತ್ ಶರ್ಮಾ ನೇತೃತ್ವದ ತಂಡದಲ್ಲಿ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ಮತ್ತು ಸೀಮರ್ ಹರ್ಷಿತ್ ರಾಣಾಗೆ ಏಕದಿನ ಮಾದರಿಗೆ ಪದಾರ್ಪಣೆ ಮಾಡಿದ್ದಾರೆ.
2024ರ ಆಗಸ್ಟ್ ನಂತರ ಭಾರತವು ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು 0-2 ರಿಂದ ಕಳೆದುಕೊಂಡ ನಂತರ ಇದು ಭಾರತದ ಮೊದಲ ODI ಆಗಿದೆ.
ಸದ್ಯ ಇಂಗ್ಲೆಂಡ್ ಐದು ಓವರ್‌ಗಳ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 26 ರನ್ ಗಳಿಸಿದೆ.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶುಭಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಶಮಿ.
ಇಂಗ್ಲೆಂಡ್ ತಂಡ
ಜೋಸ್ ಬಟ್ಲರ್ (ನಾಯಕ), ಬೆನ್ ಡಕೆಟ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್ ಮತ್ತು ಸಾಕಿಬ್ ಮಹಮೂದ್.