ರವೀಂದ್ರ ಜಡೇಜಾ 
ಕ್ರಿಕೆಟ್

1st ODI: ಇಂಗ್ಲೆಂಡ್ ವಿರುದ್ಧ ಅದ್ಭುತ ಬೌಲಿಂಗ್, Ravindra Jadeja ದಾಖಲೆ; James Anderson ರೆಕಾರ್ಡ್ ಧೂಳಿಪಟ

ಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಭಾರತ ತಂಡ 248 ರನ್‌ಗಳಿಗೆ ಆಲೌಟ್ ಮಾಡಿತು.

ನಾಗ್ಪುರ: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕ ಹಿನ್ನಡೆ ಹೊರತಾಗಿಯೂ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಭಾರತದ ರವೀಂದ್ರ ಜಡೇಜಾ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಹೌದು.. ಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಭಾರತ ತಂಡ 248 ರನ್‌ಗಳಿಗೆ ಆಲೌಟ್ ಮಾಡಿತು. ರವೀಂದ್ರ ಜಡೇಜಾ (26ಕ್ಕೆ 3) ಮತ್ತು ಹರ್ಷಿತ್ ರಾಣಾ (53ಕ್ಕೆ 3) ತಲಾ ಮೂರು ವಿಕೆಟ್ ಕಬಳಿಸಿ ಭಾರತ ಮೇಲುಗೈ ಸಾಧಿಸುವಂತೆ ಮಾಡಿದರು.

ಅಂತೆಯೇ ಇಂಗ್ಲೆಂಡ್ ಪರ ಜೋಸ್ ಬಟ್ಲರ್ ಮತ್ತು ಜಾಕೋಬ್ ಬೆಥೆಲ್ ಅರ್ಧಶತಕ ಗಳಸಿ ಮಿಂಚಿದರೂ, ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ವಿಫಲವಾಯಿತು. ಈ ಜೋಡಿ ಐದನೇ ವಿಕೆಟ್‌ಗೆ 59 ರನ್‌ಗಳ ನಿರ್ಣಾಯಕ ಜೊತೆಯಾಟವನ್ನು ನೀಡಿತು.

ಜಾಸ್ ಬಟ್ಲರ್ 67 ಎಸೆತಗಳಲ್ಲಿ 52 ರನ್ ಗಳಿಸಿದರೆ, ಬೆಥೆಲ್ 64 ಎಸೆತಗಳಲ್ಲಿ 51 ರನ್ ಗಳಿಸಿದರು. ಅಂತೆಯೇ ಆರಂಭಿಕರಾದ ಫಿಲಿಪ್ ಸಾಲ್ಟ್ ಮತ್ತು ಬೆನ್ ಡಕೆಟ್ ಇಂಗ್ಲೆಂಡ್‌ಗೆ ಅದ್ಭುತ ಆರಂಭವನ್ನು ನೀಡಿದರು. ಆದರೆ ಅದೇ ರೀತಿಯ ಬ್ಯಾಟಿಂಗ್ ಪ್ರದರ್ಶನ ಇಂಗ್ಲೆಂಡ್ ತಂಡದ ಕೆಳ ಕ್ರಮಾಂಕದ ಇತರೆ ಆಟಗಾರರಿಂದ ಮೂಡಿಬರಲಿಲ್ಲ.

ರವೀಂದ್ರ ಜಡೇಜಾ ದಾಖಲೆ

ಏತನ್ಮಧ್ಯೆ, ಇನ್ನಿಂಗ್ಸ್ ನ ಅಂತಿಮ ಹಂತದಲ್ಲಿ ಇಂಗ್ಲೆಂಡ್ ದಾಂಡಿಗರನ್ನು ಇನ್ನಿಲ್ಲದಂತೆ ಕಾಡಿದ ರವೀಂದ್ರ ಜಡೇಜಾ ಕೇವಲ 26ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿದರು. ಅಂತೆಯೇ ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಯಲ್ಲಿ ತಮ್ಮ ವಿಕೆಟ್ ಗಳಿಕೆಯನ್ನು 42ಕ್ಕೆ ಏರಿಕೆ ಮಾಡಿಕೊಂಡರು. ಆ ಮೂಲಕ ಭಾರತ vs ಇಂಗ್ಲೆಂಡ್ ಏಕದಿನ ಪಂದ್ಯಗಳಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದ ಜೇಮ್ಸ್ ಆ್ಯಂಡರ್ಸನ್ ದಾಖಲೆಯನ್ನು ರವೀಂದ್ರ ಜಡೇಜಾ ಮುರಿದರು. ಆ್ಯಂಡರ್ಸನ್ ಒಟ್ಟು 40 ವಿಕೆಟ್ ಗಳಿಸಿ ಇಷ್ಟು ದಿನ ಅಗ್ರ ಸ್ಥಾನದಲ್ಲಿದ್ದರು. ಇದೀಗ ರವೀಂದ್ರ ಜಡೇಜಾ 42 ವಿಕೆಟ್ ಗಳೊಂದಿಗೆ ಅಗ್ರ ಸ್ಥಾನಕ್ಕೇರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT