ಸಂಗ್ರಹ ಚಿತ್ರ 
ಕ್ರಿಕೆಟ್

IPL 2025 ವೇಳಾಪಟ್ಟಿ: 17 ವರ್ಷಗಳ ನಂತರ ಉದ್ಘಾಟನಾ ಪಂದ್ಯದಲ್ಲಿ KKR-RCB ಮುಖಾಮುಖಿ; ಮಾರ್ಚ್ 22 ರಿಂದ ಟೂರ್ನಿ ಆರಂಭ

ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಪಂದ್ಯ ಮಾರ್ಚ್ 22ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

ಕ್ರಿಕೆಟ್ ಅಭಿಮಾನಿಗಳು ಐಪಿಎಲ್ 2025ರ ವೇಳಾಪಟ್ಟಿಗಾಗಿ ಕಾತುರದಿಂದ ಕಾಯುತ್ತಿದ್ದರು. ಈ ಬಾರಿ 10 ತಂಡಗಳು ಆಡಲಿದ್ದು ಬಿಸಿಸಿಐ ಎಲ್ಲಾ ಪಂದ್ಯಗಳ ಸ್ಥಳ, ತಂಡಗಳು ಮತ್ತು ದಿನಾಂಕಗಳನ್ನು ಇಂದು ಪ್ರಕಟಿಸಿದೆ. ಅದರ ಪ್ರಕಾರ 18ನೇ ಋತುವಿನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಪಂದ್ಯ ಮಾರ್ಚ್ 22ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

17 ವರ್ಷಗಳ ನಂತರ ಎರಡೂ ತಂಡಗಳು ಐಪಿಎಲ್‌ನ ಉದ್ಘಾಟನಾ ಪಂದ್ಯವನ್ನು ಆಡಲಿವೆ. ಇದಕ್ಕೂ ಮೊದಲು, ಆರ್‌ಸಿಬಿ ಮತ್ತು ಕೆಕೆಆರ್ 2008ರಲ್ಲಿ ಉದ್ಘಾಟನಾ ಪಂದ್ಯವನ್ನು ಆಡಿದ್ದವು. ಈ ಬಾರಿಯ ಐಪಿಎಲ್ 65 ದಿನಗಳ ಕಾಲ ನಡೆಯಲಿದೆ. ಈ ಅವಧಿಯಲ್ಲಿ, ಪ್ಲೇಆಫ್‌ಗಳು ಮತ್ತು ಫೈನಲ್‌ಗಳು ಸೇರಿದಂತೆ 74 ಪಂದ್ಯಗಳು 13 ಸ್ಥಳಗಳಲ್ಲಿ ನಡೆಯಲಿವೆ. ಇವುಗಳಲ್ಲಿ 70 ಪಂದ್ಯಗಳು ಗುಂಪು ಹಂತದದ್ದಾಗಿರುತ್ತವೆ.

ಮಾರ್ಚ್ 23ರಂದು CSK vs MI

ಐಪಿಎಲ್ ಮಾರ್ಚ್ 22 ಶನಿವಾರ ಆರಂಭವಾಗಲಿದೆ. ಮೊದಲ 2 ದಿನಗಳಲ್ಲಿ 3 ಪಂದ್ಯಗಳು ನಡೆಯಲಿವೆ. ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯದ ನಂತರ, ಎರಡನೇ ದಿನ ಅಂದರೆ ಮಾರ್ಚ್ 23ರ ಭಾನುವಾರ, ಮಧ್ಯಾಹ್ನ 3.30 ರಿಂದ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಋತುವಿನ ಮೊದಲ ಹಣಾಹಣಿ ನಡೆಯಲಿದೆ. ಅದೇ ದಿನ ಸಂಜೆ 7.30 ಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಬ್ಲಾಕ್‌ಬಸ್ಟರ್ ಪಂದ್ಯ ನಡೆಯಲಿದೆ.

ಐಪಿಎಲ್‌ನಲ್ಲಿ ಚೆನ್ನೈ, ಮುಂಬೈ ಮತ್ತು ಬೆಂಗಳೂರು ತಂಡಗಳು ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿವೆ. ಈ ಮೂರು ತಂಡಗಳ ಪಂದ್ಯಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದನ್ನು ಅರಿತುಕೊಂಡ ಬಿಸಿಸಿಐ, ಸಿಎಸ್‌ಕೆಗೆ ಆರ್‌ಸಿಬಿ ಮತ್ತು ಎಂಐ ವಿರುದ್ಧ ತಲಾ ಎರಡು ಪಂದ್ಯಗಳನ್ನು ನಿಗದಿಪಡಿಸಿದೆ. ಚೆನ್ನೈ ತಂಡ ಮಾರ್ಚ್ 23ರಂದು ಚೆಪಾಕ್‌ನಲ್ಲಿ ಮೊದಲ ಬಾರಿಗೆ ಮುಂಬೈ ತಂಡವನ್ನು ಎದುರಿಸಲಿದೆ. ಏಪ್ರಿಲ್ 20ರಂದು ಎರಡೂ ತಂಡಗಳು ವಾಂಖೆಡೆಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಆರ್‌ಸಿಬಿ ವಿರುದ್ಧ ಸಿಎಸ್‌ಕೆಯ ಮೊದಲ ಪಂದ್ಯ ಮಾರ್ಚ್ 28ರಂದು ಚೆಪಾಕ್‌ನಲ್ಲಿ ನಡೆಯಲಿದ್ದು, ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಮೇ 3ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಐಪಿಎಲ್ 2025ರಲ್ಲಿ 70 ಗುಂಪು ಹಂತದ ಪಂದ್ಯಗಳು ನಡೆಯಲಿವೆ. ಇದರ ನಂತರ, ಲೀಗ್‌ನ ಅಗ್ರ 4 ತಂಡಗಳು ಪ್ಲೇಆಫ್‌ಗಾಗಿ ಸ್ಪರ್ಧಿಸುತ್ತವೆ. ಈ ಬಾರಿ ಪ್ಲೇಆಫ್‌ನಲ್ಲಿ ಮೊದಲ ಪಂದ್ಯ ಅಂದರೆ ಕ್ವಾಲಿಫೈಯರ್-1 ಮೇ 20 ರಂದು ನಡೆಯಲಿದೆ. ಎಲಿಮಿನೇಟರ್ ಪಂದ್ಯ ಮೇ 21 ರಂದು ನಡೆಯಲಿದ್ದು, ಕ್ವಾಲಿಫೈಯರ್ -2 ರ ಪಂದ್ಯ ಮೇ 23 ರಂದು ನಡೆಯಲಿದೆ. ಅಂತಿಮವಾಗಿ, ಮೇ 25 ರಂದು ನಡೆಯುವ ಫೈನಲ್‌ನಲ್ಲಿ ಎರಡು ತಂಡಗಳು ಪ್ರಶಸ್ತಿಗಾಗಿ ಹೋರಾಡಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT