ಚಾಂಪಿಯನ್ಸ್ ಟ್ರೋಫಿ ನಡೆಯುವ ಸ್ಥಳದಲ್ಲಿ ಭಾರತದ ಧ್ವಜ ನಾಪತ್ತೆ 
ಕ್ರಿಕೆಟ್

Champions Trophy 2025: ಟೂರ್ನಿ ಆರಂಭಕ್ಕೂ ಮುನ್ನವೇ ಭಾರತದ ಧ್ವಜವನ್ನು ಕಡೆಗಣಿಸಿದ ಪಾಕಿಸ್ತಾನ!

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಇತರ ರಾಷ್ಟ್ರಗಳ ಧ್ವಜಗಳು ಕ್ರೀಡಾಂಗಣದಲ್ಲಿ ಕಂಡುಬಂದರೆ, ಭಾರತದ ಧ್ವಜ ಕಾಣೆಯಾಗಿದೆ.

ಫೆಬ್ರುವರಿ 19 ರಿಂದ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆರಂಭವಾಗಲಿದ್ದು, ಈ ಬಾರಿ ಪಾಕಿಸ್ತಾನ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಧ್ವಜ ಗೈರಾಗಿದ್ದನ್ನು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಹೊಸ ವಿವಾದಕ್ಕೆ ಕಾರಣವಾಗಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಇತರ ರಾಷ್ಟ್ರಗಳ ಧ್ವಜಗಳು ಕ್ರೀಡಾಂಗಣದಲ್ಲಿ ಕಂಡುಬಂದರೆ, ಭಾರತದ ಧ್ವಜ ಕಾಣೆಯಾಗಿದೆ. ಈ ದೃಶ್ಯವು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದೆ. ಭಾರತದ ಧ್ವಜ ಇಲ್ಲದಿರುವುದರ ಹಿಂದಿನ ನಿಖರವಾದ ಕಾರಣ ತಿಳಿದಿಲ್ಲವಾದರೂ, ಭದ್ರತೆಯ ಕಾರಣದಿಂದಾಗಿ ಭಾರತ ತಂಡವು ತನ್ನೆಲ್ಲ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ದುಬೈನಲ್ಲಿ ಆಡುತ್ತಿದೆ. ಹೀಗಾಗಿ, ಪಾಕಿಸ್ತಾನದಲ್ಲಿ ಭಾರತದ ಧ್ವಜ ಹಾಕಿಲ್ಲದಿರಬಹುದು ಎಂದು ಹೇಳಲಾಗಿದೆ.

1996ರ ನಂತರ ಮೊದಲ ಬಾರಿಗೆ ಪಾಕಿಸ್ತಾನ ICC ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಫೆಬ್ರುವರಿ 20 ರಂದು ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಸೆಣಸಲಿದೆ.

ಪಾಕಿಸ್ತಾನದ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಯೋಜಿಸಲಾಗಿದೆ. 2025ರ ಆವೃತ್ತಿಯಲ್ಲಿ ಎಂಟು ತಂಡಗಳು ಆಡಲಿದ್ದು, ನಾಲ್ಕು ತಂಡಗಳ ಎರಡು ಗುಂಪುಗಳ್ನಾಗಿ ಮಾಡಲಾಗುತ್ತದೆ. ಪ್ರತಿ ಗುಂಪಿನಿಂದ ಅಗ್ರ ಎರಡು ಸೆಮಿಫೈನಲ್‌ಗೆ ಪ್ರವೇಶ ಪಡೆಯುತ್ತವೆ.

ಕರಾಚಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳ ಪಂದ್ಯಗಳು ನಡೆಯಲಿವೆ. ಕಾರ್ಯಕ್ರಮ ಪ್ರಾರಂಭವಾಗುವ ಕೆಲ ದಿನಗಳಿಗೂ ಮೊದಲು, ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ರಾಷ್ಟ್ರಗಳ ಧ್ವಜಗಳನ್ನು ಕ್ರೀಡಾಂಗಣದಲ್ಲಿ ಅಳವಡಿಸಲಾಗಿದ್ದು, ಈ ಪೈಕಿ ಭಾರತದ ಧ್ವಜ ಮಾತ್ರ ಅಲ್ಲಿಲ್ಲ. ಈ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಯ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಗೆ ಪರಿವರ್ತಿಸಿತು.

ಇದರ ಭಾಗವಾಗಿ, ತಂಡವು ಅರ್ಹತೆ ಪಡೆದರೆ ಸೆಮಿಫೈನಲ್ ಮತ್ತು ಫೈನಲ್ ಸೇರಿದಂತೆ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಬಿಸಿಸಿಐ, ಪಿಸಿಬಿ ಮತ್ತು ಐಸಿಸಿಯನ್ನು ಒಳಗೊಂಡಿರುವ ಒಪ್ಪಂದದ ಭಾಗವಾಗಿ, ಮುಂಬರುವ ವರ್ಷಗಳಲ್ಲಿ ಭಾರತ ಆತಿಥ್ಯ ವಹಿಸಲಿರುವ ಐಸಿಸಿ ಈವೆಂಟ್‌ಗಳಲ್ಲಿ ಪಾಕಿಸ್ತಾನ ತಂಡ ಕೂಡ ಭಾರತದಲ್ಲಿ ತನ್ನ ಪಂದ್ಯಗಳನ್ನು ಆಡುವುದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT