ಪಾಕಿಸ್ತಾನ ತಂಡ 
ಕ್ರಿಕೆಟ್

Champions Trophy 2025: ಉದ್ಘಾಟನಾ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಮುಖಭಂಗ; ನ್ಯೂಜಿಲ್ಯಾಂಡ್ ವಿರುದ್ಧ 60 ರನ್ ಸೋಲು!

29 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಐಸಿಸಿ ಟೂರ್ನಮೆಂಟ್ ನಡೆಯುತ್ತಿದೆ. ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ನ್ಯೂಜಿಲ್ಯಾಂಡ್ ಸೋಲಿನ ರುಚಿ ತೋರಿಸಿದೆ.

ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದೊಂದಿಗೆ ಚಾಂಪಿಯನ್ಸ್ ಟ್ರೋಫಿ ಆರಂಭವಾಗಿದೆ. 29 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಐಸಿಸಿ ಟೂರ್ನಮೆಂಟ್ ನಡೆಯುತ್ತಿದೆ. ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ನ್ಯೂಜಿಲ್ಯಾಂಡ್ ಸೋಲಿನ ರುಚಿ ತೋರಿಸಿದೆ.

ನ್ಯೂಜಿಲ್ಯಾಂಡ್ ನೀಡಿದ 321 ರನ್ ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನಕ್ಕೆ ಆರಂಭಿಕ ಹಿನ್ನಡೆಯಾಯಿತು. 6 ರನ್ ಗಳಿಸಿದ್ದ ಸೌದ್ ಶಕೀಲ್ ಮತ್ತು 3 ರನ್ ಗಳಿಸಿದ್ದ ಮೊಹಮ್ಮದ್ ರಿಜ್ವಾನ್ ಒ'ರೂರ್ಕ್ ಎಸೆತದಲ್ಲಿ ಓಟಾಗಿ ಪೆವಿಲಿಯನ್ ಸೇರಿದರು. ನಂತರ ಫಖರ್ ಜಮಾನ್ 24 ರನ್ ಗಳಿಸಿ ಔಟಾದರೆ, ಸಲ್ಮಾನ್ ಆಘ್ ಸ್ಫೋಟಕ ಬ್ಯಾಟಿಂಗ್ ಮಾಡಿ 28 ಎಸೆತಗಳಲ್ಲಿ 42 ರನ್ ಸಿಡಿಸಿ ಔಟಾದರು. ಬಾಬರ್ ಅಜಂ ತಾಳ್ಮೆಯ ಆಟವಾಡಿದರೂ ಸಹ ಬ್ಯಾಟರ್ ಗಳು ಸಪೋರ್ಟ್ ಮಾಡಲಿಲ್ಲ. ಅಲ್ಪಮೊತ್ತಕ್ಕೆ ಔಟಾಗಿ ಪೆವಿಲಿಯನ್ ಸೇರಿದರು. ಅಂತಿಮವಾಗಿ ಪಾಕಿಸ್ತಾನ 260 ರನ್ ಗೆ ಆಲೌಟ್ ಆಗಿದ್ದು 60 ರನ್ ಗಳಿಂದ ಸೋಲು ಕಂಡಿದೆ.

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿಯೇ 2 ಶತಕಗಳು ದಾಖಲಾಗಿವೆ. ಕರಾಚಿಯಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್‌ನ ಆರಂಭಿಕ ಆಟಗಾರರಾದ ವಿಲ್ ಯಂಗ್ ಮತ್ತು ಟಾಮ್ ಲ್ಯಾಥಮ್ ಶತಕಗಳನ್ನು ಗಳಿಸಿದ್ದಾರೆ. ವಿಲ್ ಯಂಗ್ 107 ಮತ್ತು ಟಾಮ್ ಲ್ಯಾಥಮ್ ಅಜೇಯ 118 ರನ್ ಗಳಿಸಿದರು. ಇಬ್ಬರ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 5 ವಿಕೆಟ್‌ಗೆ 320 ರನ್ ಗಳಿಸಿತು. ಇದಲ್ಲದೆ, ಗ್ಲೆನ್ ಫಿಲಿಪ್ಸ್ 39 ಎಸೆತಗಳಲ್ಲಿ 61 ರನ್ ಗಳಿಸಿದರು. ಪಾಕಿಸ್ತಾನ ಪರ ಹ್ಯಾರಿಸ್ ರೌಫ್ ಮತ್ತು ನಸೀಮ್ ಶಾ ತಲಾ 2 ವಿಕೆಟ್ ಪಡೆದರು. ಆದರೆ ರೌಫ್ 83 ರನ್ ದುಬಾರಿ ಬೌಲರ್ ಎನಿಸಿಕೊಂಡರು. ಅಬ್ರಾರ್ ಅಹ್ಮದ್ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT