ಟಾಸ್ ಸಂದರ್ಭದಲ್ಲಿ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಅವರೊಂದಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ 
ಕ್ರಿಕೆಟ್

Champions Trophy 2025: ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ಕೆ; ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಜೊತೆ ಕಣಕ್ಕಿಳಿದ ಭಾರತ

ಫಿಟ್ ಆದ ಬಳಿಕ ಚಾಂಪಿಯನ್ಸ್ ಟ್ರೋಫಿ ಆಡಲು ಮೊಹಮ್ಮದ್ ಶಮಿ ವಾಪಸಾಗಿದ್ದಾರೆ. ವರುಣ್ ಚಕ್ರವರ್ತಿ ಅಥವಾ ಕುಲದೀಪ್ ಯಾದವ್ ನಡುವೆ ಯಾರು ಅವಕಾಶ ಪಡೆಯುತ್ತಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ.

ದುಬೈ: ಗುರುವಾರ ಇಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಫಿಟ್ ಆದ ಬಳಿಕ ಚಾಂಪಿಯನ್ಸ್ ಟ್ರೋಫಿ ಆಡಲು ಮೊಹಮ್ಮದ್ ಶಮಿ ವಾಪಸಾಗಿದ್ದಾರೆ. ವರುಣ್ ಚಕ್ರವರ್ತಿ ಅಥವಾ ಕುಲದೀಪ್ ಯಾದವ್ ನಡುವೆ ಯಾರು ಅವಕಾಶ ಪಡೆಯುತ್ತಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದ್ದು ಕುಲದೀಪ್ ಯಾದವ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಂಗ್ಲಾದೇಶವು ಮೂವರು ಸೀಮರ್‌ಗಳು ಮತ್ತು ಇಬ್ಬರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿದೆ. ವೇಗಿ ನಹಿದ್ ರಾಣಾ ಬದಲಿಗೆ ತಂಜಿಮ್ ಹಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.

ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಂಝಿದ್ ಹಸನ್, ಸೌಮ್ಯ ಸರ್ಕಾರ್, ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಜೇಕರ್ ಅಲಿ, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT