ಕರ್ನಾಟಕ ಬುಲ್ಡೋಜರ್ಸ್ ತಂಡ 
ಕ್ರಿಕೆಟ್

CCL 2025: ಪಂಜಾಬ್ ವಿರುದ್ಧ ರೋಚಕ ಸೋಲು, ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ ಬುಲ್ಡೋಜರ್ಸ್!

ಟಾಸ್ ಗೆದ್ದ ಪಂಜಾಬ್ ದಿ ಶೇರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 10 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು.

ಸೂರತ್‌ನಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) 2025ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಪಂಜಾಬ್ ದಿ ಶೇರ್ ವಿರುದ್ಧ 2 ರನ್‌ಗಳಿಂದ ರೋಚಕ ಸೋಲು ಕಂಡಿದೆ. ಈಗಾಗಲೇ ಮೂರು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ ಪಂದ್ಯವು ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

ನಾಯಕ ಕಿಚ್ಚ ಸುದೀಪ್ ಅನೂಪ್ ಭಂಡಾರಿಗೆ ವಿಶ್ರಾಂತಿ ನೀಡಿ, ಅರ್ಜುನ್ ಯೋಗಿಯನ್ನು ಕರೆತಂದಿದ್ದರು. ಟಾಸ್ ಗೆದ್ದ ಪಂಜಾಬ್ ದಿ ಶೇರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 10 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು. ಪಂಜಾಬ್ ಪರ, ಬಬ್ಬಲ್ ರೈ 38 ರನ್, ರಾಹುಲ್ ಜೈಟ್ಲಿ 18 ರನ್, ನಿಂಜಾ 17 ರನ್, ಅನುಜ್ ಖುರಾನ 21 ರನ್ ಗಳಿಸಿದರು.

ಬಳಿಕ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 10 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 91 ರನ್ ಕಲೆಹಾಕಿತು. ಈ ಮೂಲಕ 30 ರನ್‌ಗಳ ಹಿನ್ನಡೆ ಅನುಭವಿಸಿತು.

ಎರಡನೇ ಇನಿಂಗ್ಸ್‌ನಲ್ಲಿ ಪಂಜಾಬ್ ದಿ ಶೇರ್ ತಂಡವನ್ನು ಕರ್ನಾಟಕ ಬುಲ್ಡೋಜರ್ಸ್ ತಂಡದ ಬೌಲರ್‌ಗಳು ಕಡಿಮೆ ರನ್‌ಗಳಿಗೆ ಕಟ್ಟಿಹಾಕಿದರು. ನಿಗದಿತ 10 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಪಂಜಾಬ್ ತಂಡ 94 ರನ್ ಕಲೆಹಾಕಿತು. ಪಂಜಾಬ್ ನೀಡಿದ 125 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ಬುಲ್ಡೋಜರ್ಸ್ ಎರಡನೇ ಇನಿಂಗ್ಸ್‌ನಲ್ಲಿ ಮೂರು ವಿಕೆಟ್ ನಷ್ಟಕ್ಕೆ 2 ರನ್‌ಗಳಿಂದ ರೋಚಕ ಸೋಲು ಕಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?