ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

CT2025: ಪಾಕ್ ವಿರುದ್ಧ ಭಾರತಕ್ಕೆ ಅಮೋಘ ಜಯ: ಸಿದ್ದು, ಡಿಕೆಶಿ, ಅಮಿತ್ ಶಾ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ!

ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾರತದ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರಿಕೆಟ್ ಪ್ರೇಮಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ

Vishwanath S
Updated On : 24 Feb 2025, 12:06 am

ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಪೇರಿಸಿ ಗೆಲುವಿನ ನಗೆ ಬೀರಿತು. ಈ ಮೂಲಕ 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಸೋಲಿಗೆ ಪ್ರತೀಕಾರ ತೀರಿಸಿಕೊಂಡಿದ್ದಾರೆ. ಅಲ್ಲದೆ ಈ ಸೋಲಿನೊಂದಿಗೆ ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿದೆ.

ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾರತದ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರಿಕೆಟ್ ಪ್ರೇಮಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ

ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ಧ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ‌ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Advertisement

Advertisement

ಡಿಸಿಎಂ ಡಿಕೆ ಶಿವಕುಮಾರ್ ಸಹ ತಂಡವನ್ನು ಅಭಿನಂದಿಸಿದ್ದಾರೆ. ಶಹಬ್ಬಾಶ್ ಹುಡುಗ್ರಾ! ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಹೃದಯಪೂರ್ವಕ ಅಭಿನಂದನೆಗಳು. ಇದು ಇಡೀ ದೇಶವೇ ಹೆಮ್ಮೆಪಡುವ ಗೆಲುವಾಗಿದೆ. ವಿರಾಟ್ ಕೊಹ್ಲಿ ಅವರ ಶತಕದಾಟ, ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ರೋಮಾಂಚಕ ಅನುಭವ ನೀಡಿತು. ಜೈಹೋ ಟೀಂ ಇಂಡಿಯಾ ಎಂದು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement