ನವದೆಹಲಿ: ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. 2017ರ ಫೈನಲ್ ಸೋಲಿನ ಸೇಡು ತೀರಿಸಿಕೊಂಡಿರುವ ಭಾರತ, ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ವಿರಾಟ್ ಕೊಹ್ಲಿ ಅವರ ಶತಕ ತಂಡದ ಗೆಲುವಿಗೆ ನೆರವಾಯಿತು.
ಭಾರತವು ಪಾಕಿಸ್ತಾನವನ್ನು ಸೋಲಿಸುತ್ತಿದ್ದಂತೆ, ಮತ್ತೊಂದು ಹೆಸರು ಸುದ್ದಿಗೆ ಗ್ರಾಸವಾಯಿತು. ಪಂದ್ಯಕ್ಕೂ ಮುನ್ನ ಭವಿಷ್ಯ ನುಡಿದಿದ್ದ ಐಐಟಿ ಬಾಬಾ, ಪಾಕಿಸ್ತಾನವು ಭಾರತವನ್ನು ಸೋಲಿಸಲಿದೆ ಎಂದು ಹೇಳಿದ್ದರು. ಇದೀಗ ಅವರ ಮಾತುಗಳು ಉಲ್ಟಾ ಆಗಿದ್ದು, ನೆಟ್ಟಿಗರು ತರಹೇವಾರಿ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ.
ಐಐಟಿ ಬಾಬಾ ಅವರ ನಿಜವಾದ ಹೆಸರು ಅಭಯ್ ಸಿಂಗ್. ಪಂದ್ಯದ ಆರಂಭಕ್ಕೂ ಮುನ್ನ ಭವಿಷ್ಯ ನುಡಿದಿದ್ದ ಅವರು, ಭಾರತ ಸೋಲುತ್ತದೆ ಮತ್ತು ವಿರಾಟ್ ಕೊಹ್ಲಿ ವಿಫಲಗೊಳ್ಳುತ್ತಾರೆ ಎಂದಿದ್ದರು. ಆದರೆ, ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವುದರ ಜೊತೆಗೆ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 111 ಎಸೆತಗಳಲ್ಲಿ ಶತಕ ಬಾರಿ ಅಜೇಯರಾಗಿ ಉಳಿದಿದ್ದಾರೆ. ಈ ಮೂಲಕ ಫಾರ್ಮ್‌ಗೆ ಮರಳಿದ್ದಾರೆ. ಭಾರತ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳು ಐಐಟಿ ಬಾಬಾ ಎಲ್ಲಿದ್ದಾರೆ ಎಂದು ಹುಡುಕಾಟಕ್ಕೆ ಇಳಿದಿದ್ದಾರೆ.
ಐಐಟಿ ಪದವೀಧರನಾಗಿದ್ದ ಅಭಯ್ ಸಿಂಗ್ ಇತ್ತೀಚೆಗೆ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿದ್ದರು. ಅದಾದ ಬಳಿಕ ಅವರು ಐಐಟಿ ಬಾಬಾ ಎಂದೇ ಪ್ರಸಿದ್ಧವಾಗಿದ್ದಾರೆ. ಇತ್ತೀಚೆಗೆ ಇನ್‌ಸ್ಟಾಗ್ರಾಂ ಲೈವ್‌ಗೆ ಬಂದಿದ್ದ ಅವರು, ಪಾಕಿಸ್ತಾನದ ವಿರುದ್ಧ ಭಾರತ ಸೋಲುತ್ತದೆ. ವಿರಾಟ್ ಕೊಹ್ಲಿ ಅಥವಾ ಯಾರು ಎಷ್ಟೇ ಪ್ರಯತ್ನ ಮಾಡಿದರೂ ಕೂಡ ಭಾರತ ಸೋಲುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದರು. ಇದೀಗ ಐಐಟಿ ಬಾಬಾ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.
ಭಾರತ ಜಯ ಸಾಧಿಸುತ್ತಿದ್ದಂತೆ #IITianBaba ಟ್ರೆಂಡಿಂಗ್ ಆಯಿತು. ಅಭಿಮಾನಿಗಳು X ನಲ್ಲಿ ಮೀಮ್‌ಗಳು ಮತ್ತು ವ್ಯಂಗ್ಯಭರಿತ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.
ಭವಿಷ್ಯ ನುಡಿದಿದ್ದ ವಿಡಿಯೋ ಹಂಚಿಕೊಂಡಿದ್ದು, ಐಐಟಿ ಬಾಬಾ ನುಡಿದಿದ್ದ ಭವಿಷ್ಯ ಸುಳ್ಳು ಎಂದು ಸಾಬೀತಾಗಿದೆ ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. ಮತ್ತೊಬ್ಬರು, 'ನಾವು ಈ #IITianBaba ಅನ್ನು ಜೀವಂತವಾಗಿ ಹಿಡಿಯಬೇಕು ಮತ್ತು ನಂತರ ಅವರನ್ನು ಭಾರತದಿಂದ ಹೊರಹಾಕಬೇಕು.." ಎಂದು ಮತ್ತೊಬ್ಬರು ಬರೆದಿದ್ದಾರೆ.https://x.com/_Bruce__007/status/1893670908750868794