ರಾವಲ್ಪಿಂಡಿ: ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಕಿವೀಸ್ ಪಡೆ 5 ವಿಕೆಟ್ ಗಳ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲ್ಯಾಂಡ್ ತಂಡ, ಬಾಂಗ್ಲಾ ತಂಡವನ್ನು 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 236 ರನ್ ಗಳಿಗೆ ಕಟ್ಟಿಹಾಕಿತು.
ಬಾಂಗ್ಲಾದೇಶದ ಪರ ನಜ್ಮುಲ್ ಹೊಸೇನ್ ಶಾಂತೊ 110 ಎಸೆತಗಳಲ್ಲಿ 77 ರನ್ ಗಳಿಸಿದರೆ, ಜಾಕರ್ ಅಲಿ 55 ಎಸೆತಗಳಲ್ಲಿ 45 ರನ್ ಗಳಿಸಿದರು. ರಶೀದ್ ಹುಸೇನ್ 25 ಎಸೆತಗಳಲ್ಲಿ 26 ರನ್ ಗಳಿಸಿದರು.
ಸಾಧಾರಣ ರನ್ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್, ತಂಡಕ್ಕೆ ರಚಿನ್ ರವೀಂದ್ರ 112 ರನ್ ಗಳಿಸುವ ಮೂಲಕ ಗೆಲುವು ಸಾಧಿಸಲು ನೆರವಾದರು, ಟಾಮ್ ಲ್ಯಾಥಮ್ 76 ಎಸೆತಗಳಲ್ಲಿ 55 ರನ್, ಡೆವೊನ್ ಕಾನ್ವೇ 45 ಎಸೆತಗಳಲ್ಲಿ 30 ರನ್ ಗಳಿಸಿದರು.
ಬಾಂಗ್ಲಾ ಬೌಲಿಂಗ್ ವಿಭಾಗದಲ್ಲಿ ರಿಷದ್ ಹೊಸೇನ್, ಮುಸ್ತಫಿಜುರ್ ರೆಹಮಾನ್, ಮೆಹಿದಿ ಹಸನ್ ಮಿರಾಜ್, ನಹಿದ್ ರಾಣಾ, ತಸ್ಕಿನ್ ಅಹ್ಮದ್ ತಲಾ ಒಂದು ವಿಕೆಟ್ ಗಳಿಸಿದರು. ಈ ಗೆಲುವಿನ ಮೂಲಕ ಸೆಮಿಫೈನಲ್ಸ್ ನಲ್ಲಿ ಭಾರತ-ನ್ಯೂಜಿಲ್ಯಾಂಡ್ ತಂಡಗಳು ಸೆಣೆಸಲಿವೆ.