ಕ್ರಿಕೆಟ್

Champions Trophy 2025: ಮಳೆಯಿಂದಾಗಿ ಆಸ್ಟ್ರೇಲಿಯಾ-ಆಫ್ರಿಕಾ ಪಂದ್ಯ ರದ್ದು; Group 'B' ಸೆಮಿಸ್ ಲೆಕ್ಕಾಚಾರವೇನು?

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 'ಎ' ಗುಂಪಿನಿಂದ ಸೆಮಿಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿವೆ. ಈ ಗುಂಪಿನಲ್ಲಿರುವ ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

ರಾವಲ್ಪಿಂಡಿ: ಭಾರೀ ಮಳೆಯಿಂದಾಗಿ ರಾವಲ್ಪಿಂಡಿಯಲ್ಲಿ ನಡೆಯಬೇಕಿದ್ದ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಚಾಂಪಿಯನ್ಸ್ ಟ್ರೋಫಿ 2025ರ ಗ್ರೂಪ್ ಬಿ ಪಂದ್ಯ ರದ್ದಾಗಿದೆ. ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿದೆ.

ಇನ್ನು ಪಂದ್ಯ ರದ್ದಾಗಿರುವುದರಿಂದ ಕೊನೆಯ ಸ್ಥಾನದಲ್ಲಿರುವ ಇಂಗ್ಲೆಂಡ್ ಅಥವಾ ಅಫ್ಘಾನಿಸ್ತಾನ ಪೈಕಿ ಒಂದು ತಂಡಕ್ಕೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಹೆಚ್ಚಾಗಿದೆ. ಏಕೆಂದರೆ ಇಂಗ್ಲೆಂಡ್ ಮತ್ತು ಆಘ್ಘಾನ್ ನಡುವೆಯೇ ಒಂದು ಪಂದ್ಯ ಇದೆ. ಈಗಾಗಲೇ ಒಂದೊಂದು ಸೋತಿರುವ ಎರಡು ತಂಡಗಳು ತಮಗೆ ಉಳಿದ ಎರಡನ್ನೂ ಗೆಲ್ಲಬೇಕು. ಒಂದು ಸೋತರೂ ತಮ್ಮ ಸೆಮೀಸ್ ಹಾದಿ ಅಲ್ಲಿಗೆ ಮುಕ್ತಾಯಗೊಳ್ಳಲಿದೆ.

ನಾಳೆ ನಡೆಯಲಿರುವ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ನಾಕೌಟ್ ಆಗಿದ್ದು, ಸೋತವರು ಸ್ಪರ್ಧೆಯಿಂದ ಹೊರಬೀಳುತ್ತಾರೆ. ಗೆದ್ದವರು ಸೆಮಿಸ್‌ಗೆ ಪ್ರವೇಶಿಸಲು ತಮ್ಮ ಮುಂದಿನ ಎದುರಾಳಿಗಳನ್ನು ಸೋಲಿಸಬೇಕಾಗುತ್ತದೆ. ಇನ್ನು ಶುಕ್ರವಾರ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ಮತ್ತು ಶನಿವಾರದಂದು ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಗಳಲ್ಲಿ ಒಂದನ್ನು ವರ್ಚುವಲ್ ಕ್ವಾರ್ಟರ್-ಫೈನಲ್ ಆಗಿರಬಹುದು. ಅಂತಿಮ ನಾಲ್ಕರ ಘಟ್ಟಕ್ಕೆ ಅರ್ಹತೆ ಪಡೆಯಲು ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ಎರಡೂ ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 'ಎ' ಗುಂಪಿನಿಂದ ಸೆಮಿಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿವೆ. ಈ ಗುಂಪಿನಲ್ಲಿರುವ ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT