ಅಫ್ಘಾನಿಸ್ತಾನ ತಂಡ 
ಕ್ರಿಕೆಟ್

Champions Trophy 2025: ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನಕ್ಕೆ ವಿರೋಚಿತ ಗೆಲುವು

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರೋಚಿತ ಗೆಲುವು ಸಾಧಿಸಿದೆ. ಅಫ್ಘಾನ್ 8 ರನ್ ಗಳಿಂದ ಗೆಲುವು ಸಾಧಿಸಿದ್ದು ಇದು ಟೂರ್ನಿಯಲ್ಲಿ ಅವರ ಮೊದಲ ಗೆಲುವಾಗಿದೆ.

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರೋಚಿತ ಗೆಲುವು ಸಾಧಿಸಿದೆ. ಅಫ್ಘಾನ್ 8 ರನ್ ಗಳಿಂದ ಗೆಲುವು ಸಾಧಿಸಿದ್ದು ಇದು ಟೂರ್ನಿಯಲ್ಲಿ ಅವರ ಮೊದಲ ಗೆಲುವಾಗಿದೆ.

ಚಾಂಪಿಯನ್ಸ್ ಟ್ರೋಫಿಯ ಎಂಟನೇ ಪಂದ್ಯವು ಲಾಹೋರ್‌ನಲ್ಲಿ ಬಿ ಗುಂಪಿನ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಶಾಹೀದಿ 40 ಮತ್ತು ಅಜ್ಮತುಲ್ಲಾ ಒಮರ್ಜೈ 41 ರನ್ ಬಾರಿಸಿದರೆ ಇಬ್ರಾಹಿಂ ಝದ್ರಾನ್ 177 ರನ್‌ಗಳ ಸ್ಫೋಟಕ ಇನ್ನಿಂಗ್ಸ್‌ನಿಂದ ಅಫ್ಘಾನಿಸ್ತಾನ 50 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 325 ರನ್ ಗಳಿಸಿತು. ಈ ಅವಧಿಯಲ್ಲಿ ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್ ಗರಿಷ್ಠ ಮೂರು ವಿಕೆಟ್ ಪಡೆದರೆ, ಲಿಯಾಮ್ ಲಿವಿಂಗ್‌ಸ್ಟೋನ್ ಎರಡು ವಿಕೆಟ್ ಪಡೆದರು. ಅದೇ ಸಮಯದಲ್ಲಿ, ಜೇಮೀ ಓವರ್ಟನ್ ಮತ್ತು ಆದಿಲ್ ರಶೀದ್ ತಲಾ ಒಂದು ಯಶಸ್ಸನ್ನು ಪಡೆದರು.

ಆಫ್ಘಾನ್ ನೀಡಿದ 326 ರನ್ ಗಳ ಗುರಿ ಬೆನ್ನಟ್ಟಿ ಇಂಗ್ಲೆಂಡ್ ತಂಡ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆದರೆ 317 ರನ್ ಗಳಿಗೆ ಆಲೌಟ್ ಆಗುವ ಮೂಲಕ 8 ರನ್ ಗಳಿಂದ ಸೋಲು ಕಂಡಿದೆ. ಇಂಗ್ಲೆಂಡ್ ಪರ ಜೋ ರೂಟ್ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದು 120 ರನ್ ಪೇರಿಸಿದರು. ಜೋಸ್ ಬಟ್ಲರ್ 38 ರನ್ ಪೇರಿಸಿದರು. ಆಫ್ಘಾನ್ ಪರ ಅಜ್ಮತುಲ್ಲಾ ಒಮರ್ಜೈ 5 ವಿಕೆಟ್ ಪಡದರೇ ಮೊಹಮ್ಮದ್ ನಬಿ 2 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT