ಲಿಟ್ಟನ್ ದಾಸ್,  Litton Das
ಕ್ರಿಕೆಟ್

ಶಿವಲಿಂಗಕ್ಕೆ ವಿಶೇಷ ಅಭಿಷೇಕ ಮಾಡಿ 'ಮಹಾ ಶಿವರಾತ್ರಿ' ಆಚರಿಸಿದ ಬಾಂಗ್ಲಾದೇಶದ ಕ್ರಿಕೆಟಿಗ; ಮೆಚ್ಚುಗೆಯ ಮಹಾಪೂರ

ಇದರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ನವದೆಹಲಿ: ಮಹಾ ಶಿವರಾತ್ರಿಯ ಶುಭ ಸಂದರ್ಭದಲ್ಲಿ ನೆರೆಯ ದೇಶದ ಕ್ರಿಕೆಟಿಗರು ದೇವಾಲಯದ ಭೇಟಿ, ಆಚರಣೆಗಳ ಮೂಲಕ ತಮ್ಮ ಭಕ್ತಿಯನ್ನು ಪ್ರದರ್ಶಿಸಿದ್ದಾರೆ. ಬಾಂಗ್ಲಾದೇಶದ ಕ್ರಿಕೆಟಿಗ ಲಿಟ್ಟನ್ ದಾಸ್,

ಮಹಾ ಶಿವರಾತ್ರಿಯನ್ನು ಭಕ್ತಿಭಾವ, ಶ್ರದ್ದಾಪೂರ್ವಕವಾಗಿ ಆಚರಿಸಿದ್ದಾರೆ. ಶಿವಲಿಂಗಗಳಿಗೆ ವಿಶೇಷ ಅಭಿಷೇಕ, ಪೂಜೆ ಪುನಸ್ಕಾರ ಮಾಡಿದ್ದಾರೆ. ಇದರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ಹಿಂದೂ ಕುಟುಂಬದಿಂದ ಬಂದಿರುವ ಲಿಟ್ಟನ್ ದಾಸ್, ಚಾಂಪಿಯನ್ ಟ್ರೋಫಿ ಪಂದ್ಯಗಳಲ್ಲಿ ಬಾಂಗ್ಲಾದೇಶದ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಇನ್ನೂ ಭಾರತದಲ್ಲಿ ಹಲವಾರು ಕ್ರಿಕೆಟ್ ತಾರೆಯರು ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಮಹಾಶಿವರಾತ್ರಿ ಆಚರಿಸಿದ್ದಾರೆ. IPL 2025 ಟೂರ್ನಿಗಾಗಿ ಮುಂಬೈ ಇಂಡಿಯನ್ಸ್ ಪರ ಆಟಗಾರರಾದ ತಿಲಕ್ ವರ್ಮಾ, ದೀಪಕ್ ಚಹಾರ್ ಮತ್ತು ಕರಣ್ ಶರ್ಮಾ ಅವರು ಮುಂಬೈನ ಐತಿಹಾಸಿಕ ಬಾಬುಲ್‌ನಾಥ್ ದೇವಾಲಯಕ್ಕೆ ಭೇಟಿ ನೀಡಿದ್ದು, ಶಿವನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತಿಲಕ್ ವರ್ಮಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಈ ಪೋಟೋ ಹಂಚಿಕೊಂಡಿದ್ದಾರೆ.

ತಿಲಕ್ ವರ್ಮಾ, ದೀಪಕ್ ಚಹಾರ್ ಮತ್ತು ಕರಣ್ ಶರ್ಮಾ

ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಮಂದಿ ಗಣ್ಯರು ದೇಶದ ಜನತೆಗೆ ಮಹಾಶಿವರಾತ್ರಿಯ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ