ಬೆನ್ ಡಕೆಟ್ 
ಕ್ರಿಕೆಟ್

ಆಂಗ್ಲರ ಚಾಂಪಿಯನ್ಸ್‌ ಟ್ರೋಫಿ ಕನಸು ಭಗ್ನ; ಭಾರತ ಸೋಲಿಸುವುದೇ ಮುಖ್ಯ ಎಂದಿದ್ದ ಇಂಗ್ಲೆಂಡ್ ಆಟಗಾರ ಟ್ರೋಲ್!

ಭಾರತವು ಪಂದ್ಯಾವಳಿಯಲ್ಲಿ ತಮ್ಮ ಎರಡೂ ಪಂದ್ಯಗಳನ್ನು ಗೆದ್ದಿದ್ದು, ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಆದರೆ, ಇಂಗ್ಲೆಂಡ್ ಟೂರ್ನಿಯಿಂದ ಹೊರಬಿದ್ದಿದೆ.

ಭಾರತ ಕ್ರಿಕೆಟ್ ತಂಡದ ಬಗ್ಗೆ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಬೆನ್ ಡಕೆಟ್ ಅವರು ಮಾಡಿದ್ದ ಹಳೆಯ ಹೇಳಿಕೆ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್‌ಗೆ ಗುರಿಯಾಗಿದೆ. ಬುಧವಾರ ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ ರೋಚಕ ಗೆಲುವು ಸಾಧಿಸಿದ್ದು, ಜೋಸ್ ಬಟ್ಲರ್ ನೇತೃತ್ವದ ತಂಡವು 2025ರ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದೆ. ಇಂಗ್ಲೆಂಡ್ ತಂಡ ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದ ಕಾರಣ ಡಕೆಟ್ ಅವರು ಮಾಡಿದ್ದ ಹಳೆಯ ಹೇಳಿಕೆಯನ್ನು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಟ್ರೋಲ್ ಮಾಡಲಾಗುತ್ತಿದೆ.

ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವನ್ನು ಇಂಗ್ಲೆಂಡ್ ಸೋಲಿಸಿದರೆ ಸಾಕು. ಭಾರತದ ವಿರುದ್ಧ 3-0 ಏಕದಿನ ಸರಣಿ ಸೋಲಿನ ಬಗ್ಗೆ ನನಗೆ ಕಾಳಜಿ ಇಲ್ಲ ಎಂದು ಹೇಳಿದ್ದರು. ಭಾರತವು ಪಂದ್ಯಾವಳಿಯಲ್ಲಿ ತಮ್ಮ ಎರಡೂ ಪಂದ್ಯಗಳನ್ನು ಗೆದ್ದಿದ್ದು, ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಆದರೆ, ಇಂಗ್ಲೆಂಡ್ ಟೂರ್ನಿಯಿಂದ ಹೊರಬಿದ್ದಿದೆ.

'ನಾವು ಟೀಂ ಇಂಡಿಯಾ ವಿರುದ್ಧ 3-0 ಅಂತರದಿಂದ ಸೋತರೂ ಅದು ನನಗೆ ಮುಖ್ಯವಾಗುವುದಿಲ್ಲ. ಏಕೆಂದರೆ, ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಅವರನ್ನು ಸೋಲಿಸುವುದೇ ನನಗೆ ಮುಖ್ಯ' ಎಂದು ಅಹಮದಾಬಾದ್‌ನಲ್ಲಿ ನಡೆದ ಭಾರತ-ಇಂಗ್ಲೆಂಡ್ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಡಕೆಟ್ ಹೇಳಿದ್ದರು.

ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುವುದು ಪ್ರಸ್ತುತ ಸರಣಿಯಲ್ಲಿನ ಸೋಲನ್ನು ಸರಿದೂಗಿಸುತ್ತದೆ. ಸರಣಿಯ ಫಲಿತಾಂಶಕ್ಕಿಂತ ಹೆಚ್ಚು ಪ್ರತಿಷ್ಠಿತ ಪಂದ್ಯಾವಳಿಯನ್ನು ಗೆಲ್ಲುವುದೇ ನನಗೆ ಮುಖ್ಯ ಎಂದಿದ್ದರು.

ಆರಂಭಿಕ ಆಟಗಾರ ಇಬ್ರಾಹಿಂ ಜದ್ರಾನ್ ಅವರ 177 ರನ್ ಮತ್ತು ಅಜ್ಮತುಲ್ಲಾ ಒಮರ್‌ಜೈ ಅವರ ಐದು ವಿಕೆಟ್‌ಗಳ ನೆರವಿನಿಂದ ಅಫ್ಘಾನಿಸ್ತಾನ ತಂಡವು ಬುಧವಾರ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಂಟು ರನ್‌ಗಳ ರೋಚಕ ಗೆಲುವು ಸಾಧಿಸುವ ಮೂಲಕ ಇಂಗ್ಲೆಂಡ್ ತಂಡವನ್ನು ಚಾಂಪಿಯನ್ಸ್ ಟ್ರೋಫಿಯಿಂದ ಹೊರದಬ್ಬಲು ನೆರವಾಯಿತು.

ಲಾಹೋರ್‌ನಲ್ಲಿ ನಡೆದ ವರ್ಚುವಲ್ ನಾಕೌಟ್ ಟೈನಲ್ಲಿ ಅಫ್ಘಾನಿಸ್ತಾನ 7 ವಿಕೆಟ್ ನಷ್ಟಕ್ಕೆ 325 ರನ್ ಗಳಿಸಿತು. ನಂತರ ಇಂಗ್ಲೆಂಡ್ ಅನ್ನು 49.5 ಓವರ್‌ಗಳಲ್ಲಿ 317 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಈ ಮೂಲಕ ಅಪ್ಗಾನಿಸ್ತಾನ ಸೆಮಿಫೈನಲ್ ತಲುಪುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT