ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟೆಸ್ಟ್‌ ಕ್ರಿಕೆಟ್‌ನ ಮೊದಲ ದಿನ ಭಾರತದ ರಿಷಬ್ ಪಂತ್ ಬ್ಯಾಟಿಂಗ್ ವೈಖರಿ. 
ಕ್ರಿಕೆಟ್

BGT 2025, Ind vs Aus 5th test: ಆಸ್ಟ್ರೇಲಿಯಾದ ಬೌಲಿಂಗ್ ದಾಳಿಗೆ ಭಾರತ ತತ್ತರ; 185ಕ್ಕೆ ಆಲೌಟ್

ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೆ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ.

ಸಿಡ್ನಿ: ಶುಕ್ರವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ನ ಆರಂಭಿಕ ದಿನದಂದು ಭಾರತ 185 ರನ್‌ಗಳಿಗೆ ಆಲೌಟ್ ಆಗಿದೆ.

ಚಹಾ ವಿರಾಮದ ವೇಳೆಗೆ 3 ವಿಕೆಟ್‌ ನಷ್ಟಕ್ಕೆ 57 ರನ್ ಗಳಿಸಿದ್ದ ಭಾರತ ನಂತರ 4 ವಿಕೆಟ್‌ ನಷ್ಟಕ್ಕೆ 107 ರನ್‌ಗಳನ್ನು ಕಲೆಹಾಕುವ ಮೂಲಕ ಚೇತರಿಸಿಕೊಂಡಿತ್ತು. ಆದರೆ, ಅಂತಿಮ ಅವಧಿಯಲ್ಲಿ ಕೇವಲ 78 ರನ್‌ಗಳಿಗೆ ಉಳಿದ ಆರು ವಿಕೆಟ್‌ಗಳನ್ನು ಕಳೆದುಕೊಂಡಿತು.

ಭಾರತದ ಪರ ರಿಷಭ್ ಪಂತ್ 98 ಎಸೆತಗಳಲ್ಲಿ 40 ಗರಿಷ್ಠ ರನ್ ಗಳಿಸಿದರೆ, ಆರಂಭಿಕರಾಗಿ ಬಂದ ಯಶಸ್ವಿ ಜೈಸ್ವಾಲ್ 10 ರನ್ ಗಳಿಸಿದರೆ, ಕೆಎಲ್ ರಾಹುಲ್ ಕೇವಲ 4 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಶುಭಮನ್ ಗಿಲ್ 20, ವಿರಾಟ್ ಕೊಹ್ಲಿ 17, ರವೀಂದ್ರ ಜಡೇಜಾ 26, ವಾಷಿಂಗ್ಟನ್ ಸುಂದರ್ 14, ಕನ್ನಡಿಗ ಪ್ರಸಿದ್ಧ್ ಕೃಷ್ಣ 3, ಜಸ್ಪ್ರೀತ್ ಬುಮ್ರಾ 22 ರನ್ ಗಳಿಸಿದ್ದಾರೆ. ನಿತೀಶ್ ರೆಡ್ಡಿ ಶೂನ್ಯಕ್ಕೆ ನಿರ್ಗಮಿಸಿದ್ದಾರೆ.

ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ 2, ಸ್ಕಾಟ್ ಬೋಲ್ಯಾಂಡ್ 4 ಮತ್ತು ನಾಥನ್ ಲಿಯಾನ್ ಒಂದು ವಿಕೆಟ್ ಕಬಳಿಸಿದ್ದಾರೆ.

ಆಸ್ಟ್ರೇಲಿಯಾ ಬೌಲರ್‌ಗಳ ಮಾರಕ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ಗಳು ರನ್‌ಗಳಿಗಲು ತಡಕಾಡಿದ್ದು, ಯಾರಿಂದಲೂ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ. ಮತ್ತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ದಿನದ ಅಂತ್ಯಕ್ಕೆ ಜಸ್ಪ್ರೀತ್ ಬುಮ್ರಾ ಮಾರಕ ದಾಳಿಗೆ ಉಸ್ಮಾನ್ ಖವಾಜಾ ಅವರ ವಿಕೆಟ್ ಕಳೆದುಕೊಂಡು, 9 ರನ್ ಗಳಿಸಿದೆ.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸರಣಿಯ ಅಂತಿಮ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದು, ನಾಯಕನಾಗಿ ಜಸ್ಪ್ರೀತ್ ಬುಮ್ರಾ ಅವರು ತಂಡವನ್ನು ಮುನ್ನಡೆಸುತ್ತಿದ್ದಾರೆ.

ಸದ್ಯ ಭಾರತ ಸರಣಿಯಲ್ಲಿ 1-2 ಹಿನ್ನಡೆಯಲ್ಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸು ಜೀವಂತವಾಗಿರಿಸಲು ಭಾರತ ಈ ಪಂದ್ಯ ಗೆಲ್ಲಲೇಬೇಕಿದೆ. ಬಳಿಕ ನಡೆಯುವ ಆಸ್ಟ್ರೇಲಿಯಾ ವಿರುದ್ದದ ಸರಣಿಯಲ್ಲಿ ಶ್ರೀಲಂಕಾ 2-0 ಅಂತರದಲ್ಲಿ ಗೆದ್ದರೆ ಮಾತ್ರ ಭಾರತಕ್ಕೆ ಫೈನಲ್ ತಲುಪುವ ಅವಕಾಶವಿರುತ್ತದೆ.

ಉಭಯ ತಂಡಗಳ ಆಡುವ ಬಳಗ

ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ನಾಯಕ), ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ: ಸ್ಯಾಮ್ ಕೋನ್‌ಸ್ಟಾಸ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶಾನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಬ್ಯೂ ವೆಬ್‌ಸ್ಟರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT