ಸಿಡ್ನಿ ಟೆಸ್ಟ್ 
ಕ್ರಿಕೆಟ್

BGT 2025 5th test: 70 ವರ್ಷಗಳಲ್ಲಿ ಇದೇ ಮೊದಲು, SCGಯಲ್ಲಿ ಉಭಯ ತಂಡಗಳ ಕಳಪೆ ಬ್ಯಾಟಿಂಗ್ ದಾಖಲೆ!

ಭಾರತ ಮತ್ತು ಆಸ್ಟ್ರೇಲಿಯಾ ಉಭಯ ತಂಡಗಳೂ ಮೊದಲ ಇನ್ನಿಂಗ್ಸ್ ನಲ್ಲಿ 200ಕ್ಕಿಂತ ಕಡಿಮೆ ರನ್ ಗಳಿಗೆ ಆಲೌಟ್ ಆಗಿದ್ದು ಆ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ಕಳಪೆ ದಾಖಲೆಗೆ ಪಾತ್ರವಾಗಿದೆ.

ಸಿಡ್ನಿ: ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಉಭಯ ತಂಡಗಳ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ 70 ವರ್ಷಗಳ ಹಿಂದಿನ ಹೀನಾಯ ದಾಖಲೆಗೆ ಪಾತ್ರವಾಗಿದೆ.

ಹೌದು.. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಉಭಯ ತಂಡಗಳೂ ಮೊದಲ ಇನ್ನಿಂಗ್ಸ್ ನಲ್ಲಿ 200ಕ್ಕಿಂತ ಕಡಿಮೆ ರನ್ ಗಳಿಗೆ ಆಲೌಟ್ ಆಗಿದ್ದು ಆ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ಕಳಪೆ ದಾಖಲೆಗೆ ಪಾತ್ರವಾಗಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 185 ರನ್ ಗಳಿಗೇ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಆಸ್ಟ್ರೇಲಿಯಾ ಕೂಡ 181 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು ಕೊಂಡು 4 ರನ್ ಗಳ ಹಿನ್ನಡೆ ಅನುಭವಿಸಿತು. ಆ ಮೂಲಕ ಈ ಪಂದ್ಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಉಭಯ ತಂಡಗಳು ಇನ್ನಿಂಗ್ಸ್ ವೊಂದರಲ್ಲಿ 200ಕ್ಕಿಂತ ಕಡಿಮೆ ರನ್ ಗೆ ಆಲೌಟ್ ಆದ 2ನೇ ನಿದರ್ಶನ ಇದಾಗಿದೆ.

ಈ ಹಿಂದೆ 1979/80ರಲ್ಲಿ ನಡೆದಿದ್ದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ಉಭಯ ತಂಡಗಳೂ ಮೊದಲ ಇನ್ನಿಂಗ್ಸ್ ನಲ್ಲಿ 200ಕ್ಕಿಂತ ಕಡಿಮೆ ರನ್ ಗಳಿಗೆ ಆಲೌಟ್ ಆಗಿತ್ತು. ಅಂದು ಇಂಗ್ಲೆಂಡ್ 123ರನ್ ಗಳಿಗೇ ಆಲೌಟ್ ಆಗಿದ್ದರೆ, ಆಸ್ಟ್ರೇಲಿಯಾ ಕೇವಲ 145 ರನ್ ಗಳಿಗೆ ಸರ್ವಪತನ ಕಂಡಿತ್ತು. ಇದೀಗ ಭಾರತ ಮತ್ತು ಆಸ್ಚ್ರೇಲಿಯಾ ನಡುವಿನ ಸಿಡ್ನಿ ಟೆಸ್ಟ್ ಈ ಪಟ್ಟಿಗೆ ಸೇರ್ಪಡೆಯಾಗಿದೆ.

STAT: Only the second time in the last 70 years at SCG both teams have been bowled out under 200 in their first innings. The other instance happened in the Test bw England (123) & Australia (145) in 1979/80.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT