ಸುನಿಲ್ ಗವಾಸ್ಕರ್ 
ಕ್ರಿಕೆಟ್

'ಭಾರತೀಯನಾಗಿದ್ದಕ್ಕೇ...': ಆಸ್ಟ್ರೇಲಿಯಾದಲ್ಲಿ Sunil Gavaskar ಗೆ ಅಪಮಾನ; ಅಸಮಾಧಾನ ಹೊರ ಹಾಕಿದ 'ಸನ್ನಿ'

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಸುನಿಲ್ ಗವಾಸ್ಕರ್ ಅವರಿಗೆ ಆಯೋಜಕರು ಅಪಮಾನ ಮಾಡಿದ್ದು, ಅವರ ಗೈರಿನಲ್ಲೇ ಪ್ರಶಸ್ತಿ ಪ್ರದಾನ ಮಾಡಿರುವ ಘಟನೆ ನಡೆದಿದೆ.

ಸಿಡ್ನಿ: ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿ ಅಂತ್ಯವಾಗಿದ್ದು 3-1 ಅಂತರದಲ್ಲಿ ಆಸ್ಟ್ರೇಲಿಯಾ ಸರಣಿ ಕೈವಶ ಮಾಡಿಕೊಂಡಿದೆ. ಆದರೆ ಸರಣಿ ಅಂತ್ಯದಲ್ಲಿ ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಗೆ ಆಯೋಜಕರು ಅಪಮಾನ ಮಾಡಿದ್ದಾರೆ ಎನ್ನಲಾಗಿದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಸುನಿಲ್ ಗವಾಸ್ಕರ್ ಅವರಿಗೆ ಆಯೋಜಕರು ಅಪಮಾನ ಮಾಡಿದ್ದು, ಅವರ ಗೈರಿನಲ್ಲೇ ಪ್ರಶಸ್ತಿ ಪ್ರದಾನ ಮಾಡಿರುವ ಘಟನೆ ನಡೆದಿದೆ.

ಆಸ್ಟ್ರೇಲಿಯಾದ ಅಲನ್ ಬಾರ್ಡರ್‌ ಹಾಗೂ ಭಾರತದ ಸುನಿಲ್ ಗವಾಸ್ಕರ್ ಹೆಸರಿನಲ್ಲಿ ಈ ಸರಣಿ ನಡೆದಿತ್ತು. ಸರಣಿ ಗೆದ್ದ ಆಸ್ಟ್ರೇಲಿಯಾ ತಂಡಕ್ಕೆ ಬಾರ್ಡರ್ ಅವರು ಟ್ರೋಫಿಯನ್ನು ನೀಡಿದರು. ಆದರೆ ಅದೇ ಸಮಯದಲ್ಲಿ ಗವಾಸ್ಕರ್, ಸ್ಥಳದಲ್ಲಿದ್ದರೂ ಅವರನ್ನು ನಿರ್ಲಕ್ಷಿಸಲಾಗಿತ್ತು.

ಆದರೆ ಭಾರತ ವಿರುದ್ಧ ಸರಣಿ ಗೆದ್ದ ಬಳಿಕ ಆಸ್ಟ್ರೇಲಿಯಾ ತಂಡಕ್ಕೆ ಟ್ರೋಫಿ ನೀಡಲು ತಮ್ಮನ್ನು ಆಹ್ವಾನಿಸದಿದ್ದಕ್ಕಾಗಿ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಭಾನುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಸುನಿಲ್ ಗವಾಸ್ಕರ್, 'ನಾನು ಭಾರತೀಯನಾಗಿದ್ದರಿಂದಲೇ ಈ ರೀತಿ ಅಪಮಾನ ಮಾಡಿದ್ದಾರೆ. ನಿಸ್ಸಂಶಯವಾಗಿ ನಾನು ಟ್ರೋಫಿ ನೀಡಲು ಇಷ್ಟಪಡುತ್ತಿದ್ದೆ. ಇದು ಬಾರ್ಡರ್-ಗವಾಸ್ಕರ್ ಟ್ರೋಫಿ. ಆಸ್ಟ್ರೇಲಿಯಾ ಮತ್ತು ಭಾರತಕ್ಕೆ ಸಂಬಂಧಿಸಿದ್ದು’ ಎಂದು ಗವಾಸ್ಕರ್‌ ಹೇಳಿದ್ದಾರೆ.

‘ನಾನು ಮೈದಾನದಲ್ಲಿದ್ದೆ. ಇಲ್ಲಿ ಆಸ್ಟ್ರೇಲಿಯಾ ಗೆದ್ದಿರುವುದು ನನಗೆ ಮುಖ್ಯವಲ್ಲ. ಅವರು ಉತ್ತಮ ಕ್ರಿಕೆಟ್ ಆಡಿದರು, ಆದ್ದರಿಂದ ಅವರು ಗೆದ್ದರು. ನನ್ನ ಉತ್ತಮ ಸ್ನೇಹಿತ ಅಲನ್ ಬಾರ್ಡರ್ ಅವರೊಂದಿಗೆ ಟ್ರೋಫಿಯನ್ನು ನೀಡಲು ನಾನು ಸಂತೋಷಪಡುತ್ತೇನೆ’ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!