ಯುಜ್ವೇಂದ್ರ ಚಾಹಲ್ - ಧನಶ್ರೀ ವರ್ಮಾ 
ಕ್ರಿಕೆಟ್

ಯುಜ್ವೇಂದ್ರ ಚಾಹಲ್ ಜೊತೆಗಿನ ವಿಚ್ಛೇದನದ ವದಂತಿ; ಕೊನೆಗೂ ಮೌನ ಮುರಿದ ಧನಶ್ರೀ ವರ್ಮಾ

ದ್ವೇಷವನ್ನು ಹರಡುವ ಟ್ರೋಲ್‌ಗಳಿಂದ ನನ್ನ ಚಾರಿತ್ರ್ಯ ಹರಣ ಮಾಡಲಾಗುತ್ತಿದೆ.

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಯುಜ್ವೇಂದ್ರ ಚಾಹಲ್ ಅವರ ಪತ್ನಿ ಧನಶ್ರೀ ವರ್ಮಾ ಅವರು ವಿಚ್ಛೇದನದ ವದಂತಿಗಳ ನಡುವೆ ಬುಧವಾರ ರಾತ್ರಿ ಮೌನ ಮುರಿದಿದ್ದಾರೆ. ಚಹಾಲ್ ಮತ್ತು ಧನಶ್ರೀ ವಿಚ್ಛೇದನ ನೀಡುತ್ತಿದ್ದಾರೆ ಎನ್ನುವ ಸುದ್ದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಕೇಳಿಬರುತ್ತಿವೆ.

ಯೂಟ್ಯೂಬರ್, ನೃತ್ಯ ಸಂಯೋಜಕಿ ಮತ್ತು ದಂತವೈದ್ಯೆಯಾಗಿರುವ ಧನಶ್ರೀ ಅವರೊಂದಿಗೆ ಚಾಹಲ್ ಅವರು 2020 ಆಗಸ್ಟ್ 8ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ 2020ರ ಡಿಸೆಂಬರ್ 22ರಂದು ಗುರ್ಗಾಂವ್‌ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ವರದಿಗಳ ಪ್ರಕಾರ, ಚಾಹಲ್ ಅವರು ಧನಶ್ರೀ ಅವರೊಂದಿಗಿನ ಎಲ್ಲ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕಿರುವುದು ಮತ್ತು ಧನಶ್ರೀ ಅವರು ತಮ್ಮ ಹೆಸರಿನ ಮುಂದಿದ್ದ ಚಾಹಲ್ ಎನ್ನುವುದನ್ನು ತೆಗೆದುಹಾಕಿದ ಬಳಿಕ ಇಬ್ಬರ ನಡುವೆ ಭಿನ್ನಾಭಿಪ್ರಾಯ ತಲೆದೋರಿರುವ ಬಗ್ಗೆ ಮಾತುಗಳು ಕೇಳಿಬಂದಿದ್ದವು. ಮುಂದುವರಿದು ದಂಪತಿ ಡಿವೋರ್ಸ್ ಪಡೆದಿದ್ದಾರೆ ಎನ್ನುವ ವದಂತಿಗಳೂ ಸಾಮಾಜಿಕ ಮಾಧ್ಯಮಗಳಲ್ಲಿ ದಟ್ಟವಾಗಿ ಹರಡಿದ್ದವು. ಹೀಗಿದ್ದರೂ, ಧನಶ್ರೀ ಅವರು ಚಾಹಲ್ ಅವರ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಗೆಯೇ ಉಳಿಸಿಕೊಂಡಿದ್ದು, ಇದು ನೆಟ್ಟಿಗರ ಆಶ್ಚರ್ಯಕ್ಕೆ ಕಾರಣವಾಗಿದೆ.

'ಕಳೆದ ಕೆಲವು ದಿನಗಳು ನನ್ನ ಕುಟುಂಬ ಮತ್ತು ನನಗೆ ತುಂಬಾ ಕಠಿಣವಾಗಿ ಪರಿಣಮಿಸಿವೆ. ನಿರಾಧಾರ ಬರವಣಿಗೆ, ಸತ್ಯವನ್ನು ಪರಿಶೀಲಿಸದಿರುವುದು ಮತ್ತು ದ್ವೇಷವನ್ನು ಹರಡುವ ಟ್ರೋಲ್‌ಗಳಿಂದ ನನ್ನ ಚಾರಿತ್ರ್ಯ ಹರಣ ಮಾಡಲಾಗುತ್ತಿದೆ' ಎಂದು ಧನಶ್ರೀ ಇನ್‌ಸ್ಟಾಗ್ರಾಂನಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

ಧನಶ್ರೀ ವರ್ಮಾ ಹಂಚಿಕೊಂಡಿರುವ ಪೋಸ್ಟ್

'ನನ್ನ ಹೆಸರು ಮತ್ತು ಸಮಗ್ರತೆಯನ್ನು ಕಟ್ಟಿಕೊಳ್ಳಳು ನಾನು ಅನೇಕ ವರ್ಷಗಳಿಂದ ಶ್ರಮಿಸಿದ್ದೇನೆ. ನನ್ನ ಮೌನವು ದೌರ್ಬಲ್ಯದ ಸಂಕೇತವಲ್ಲ; ಆದರೆ ಶಕ್ತಿಯ ಸಂಕೇತವಾಗಿದೆ. ನಕಾರಾತ್ಮಕತೆಯು ಆನ್‌ಲೈನ್‌ನಲ್ಲಿ ಸುಲಭವಾಗಿ ಹರಡುತ್ತದೆ. ಆದರೆ, ಇತರರನ್ನು ಮೇಲಕ್ಕೆತ್ತಲು ಧೈರ್ಯ ಮತ್ತು ಸಹಾನುಭೂತಿ ಬೇಕಾಗುತ್ತದೆ. ನಾನು ನನ್ನ ಸತ್ಯದ ಮೇಲೆ ಗಮನ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯಲು ಆಯ್ಕೆ ಮಾಡುತ್ತೇನೆ. ಸತ್ಯವು ಎತ್ತರದಲ್ಲಿದ್ದು, ಅದಕ್ಕೆ ಸಮರ್ಥನೆಯ ಅಗತ್ಯವಿಲ್ಲ' ಎಂದಿದ್ದಾರೆ.

ಇನ್ನು ಮಂಗಳವಾರ ಚಾಹಲ್ ಕೂಡ ಇನ್‌ಸ್ಟಾಗ್ರಾಂನಲ್ಲಿ ನಿಗೂಢ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. 'ಶಬ್ದಗಳಿಗಿಂತ ಇತರ ಭಾವನೆಗಳಲ್ಲಿ ಕೇಳುವವರಿಗೆ ಮೌನವು ಅಳವಾದ ಮಧುರವಾಗಿದೆ - ಸಾಕ್ರೆಟೀಸ್' ಎಂದಿದ್ದಾರೆ.

ಇದಕ್ಕೂ ಮುನ್ನ ಶನಿವಾರ ಚಾಹಲ್ ಅವರು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮತ್ತೊಂದು ರಹಸ್ಯ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. 'ಕಠಿಣ ಪರಿಶ್ರಮವು ಜನರ ವ್ಯಕ್ತಿತ್ವವನ್ನು ಗುರುತಿಸುತ್ತದೆ, ನಿಮ್ಮ ಪ್ರಯಾಣ ನಿಮಗೆ ತಿಳಿದಿದೆ, ನಿಮ್ಮ ನೋವು ನಿಮಗೆ ತಿಳಿದಿದೆ, ಇಲ್ಲಿಗೆ ತಲುಪಲು ನೀವು ಏನು ಮಾಡಿದ್ದೀರಿ ಎಂಬುದು ನಿಮಗೆ ತಿಳಿದಿದೆ. ಜಗತ್ತಿಗೆ ತಿಳಿದಿದೆ. ನೀವು ಎತ್ತರದಲ್ಲಿದ್ದೀರಿ. ನಿಮ್ಮ ತಂದೆ ಮತ್ತು ತಾಯಿ ಹೆಮ್ಮೆಪಡುವಲ್ಲಿ ನೀವು ನಿಮ್ಮ ಬೆವರನ್ನು ಚೆಲ್ಲಿ ಕೆಲಸ ಮಾಡಿದ್ದೀರಿ. ಹೆಮ್ಮೆಪಡುವ ಮಗನಂತೆ ಯಾವಾಗಲೂ ಎತ್ತರವಾಗಿ ನಿಲ್ಲಿ' ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT