ರವೀಂದ್ರ ಜಡೇಜಾ 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್: BCCI ನಿಯಮ ಉಲ್ಲಂಘಿಸಿದ ರವೀಂದ್ರ ಜಡೇಜಾ! ಶಿಕ್ಷೆಗೊಳಗಾಗುವರೇ?

ಎಲ್ಲಾ ತಂಡದ ಸದಸ್ಯರು ತಂಡದ ಬಸ್‌ನಲ್ಲಿ ಕ್ರೀಡಾಂಗಣ ಮತ್ತು ಅಭ್ಯಾಸದ ಅವಧಿಗೆ ಒಟ್ಟಿಗೆ ಪ್ರಯಾಣಿಸಬೇಕಾಗುತ್ತದೆ.

ಎಡ್ಜ್‌ಬಾಸ್ಟನ್: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ಆಲ್ ರೌಂಡರ್ ರವೀಂದ್ರ ಜಡೇಜಾ ಬಿಸಿಸಿಐನ ಹೊಸದಾದ ಪ್ರಮುಖ ನಿಯಮವೊಂದನ್ನು ಉಲ್ಲಂಘಿಸಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ನಿರ್ಣಾಯಕ 89 ರನ್ ಗಳಿಸಿದ ಜಡೇಜಾ, ಎಡ್ಜ್‌ಬಾಸ್ಟನ್ ಕ್ರೀಡಾಂಗಣಕ್ಕೆ ಪ್ರತ್ಯೇಕವಾಗಿ ತೆರಳಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸದ ನಂತರ ಹೊರಡಿಸಲಾದ ಹೊಸ BCCI ಮಾರ್ಗಸೂಚಿ ಪ್ರಕಾರ, ಎಲ್ಲಾ ತಂಡದ ಸದಸ್ಯರು ತಂಡದ ಬಸ್‌ನಲ್ಲಿ ಕ್ರೀಡಾಂಗಣ ಮತ್ತು ಅಭ್ಯಾಸದ ಅವಧಿಗೆ ಒಟ್ಟಿಗೆ ಪ್ರಯಾಣಿಸಬೇಕಾಗುತ್ತದೆ. ಹೊಸ ನಿಯಮವು ತಂಡದೊಳಗೆ ಶಿಸ್ತನ್ನು ಕಾಪಾಡಿಕೊಳ್ಳುವ ಗುರಿಯೊಂದಿಗೆ ಪ್ರತ್ಯೇಕವಾಗಿ ತೆರಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.

ಜಡೇಜಾ ಏಕಾಂಗಿಯಾಗಿ ಎಡ್ಜ್‌ಬಾಸ್ಟನ್ ಕ್ರೀಡಾಂಗಣಕ್ಕೆ ಪ್ರಯಾಣಿಸಿದ್ದು, ಬಿಸಿಸಿಐ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ESPNcricinfo ಗುರುವಾರ ವರದಿ ಮಾಡಿದೆ.

ಆದಾಗ್ಯೂ, ಜಡೇಜಾ ಅವರು ಯಾವುದೇ ನಿರ್ಬಂಧವನ್ನು ಎದುರಿಸುವ ಸಾಧ್ಯತೆಯಿಲ್ಲ ಎನ್ನಲಾಗಿದೆ. ಏಕೆಂದರೆ ಪಂದ್ಯಕ್ಕೂ ಮುನ್ನಾ ಕೆಲವು ಹೆಚ್ಚುವರಿ ಬ್ಯಾಟಿಂಗ್ ಅಭ್ಯಾಸ ಮಾಡಲು ಅವರು ತಂಡದ ಇತರರಿಗಿಂತ ಮುಂಚಿತವಾಗಿ ಸ್ಟೇಡಿಯಂ ತೆರಳಿರುವುದಾಗಿ ತಿಳಿದುಬಂದಿದೆ.

ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಜಡೇಜಾ ಮತ್ತು ಶುಭಮನ್ ಗಿಲ್ ಜೋಡಿ ಭಾರತ ತಂಡ 587 ರನ್‌ಗಳ ಬೃಹತ್ ಮೊತ್ತ ಗಳಿಸಲು ನೆರವಾಯಿತು. ಜಡೇಜಾ 137 ಎಸೆತಗಳಲ್ಲಿ 89 ರನ್ ಗಳಿಸಿ ಪ್ರಮುಖ ಪಾತ್ರ ವಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!