ಕ್ರಿಕೆಟ್

India vs England: ಇಂಗ್ಲೆಂಡ್‌ಗೆ 608 ರನ್‌ ಬೃಹತ್‌ ಗುರಿ ನೀಡಿದ ಭಾರತ; ದಾಖಲೆ ಬರೆದ ಗಿಲ್ ಶತಕ!

ನಾಯಕ ಶುಭಮನ್‌ ಗಿಲ್‌ ಶತಕ, ರಿಷಭ್‌ ಪಂತ್‌ ಹಾಗೂ ಕೆ.ಎಲ್‌ ರಾಹುಲ್‌ ಅರ್ಧಶತಕಗಳ ನೆರವಿನಿಂದ ಭಾರತ 2ನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗೆ 427 ರನ್ ‌ಗಳಿಸಿ ಡಿಕ್ಲೇರ್‌ ಮಾಡಿಕೊಂಡಿದೆ.

ಇಂಗ್ಲೆಂಡ್: ನಾಯಕ ಶುಭಮನ್‌ ಗಿಲ್‌ ಶತಕ, ರಿಷಭ್‌ ಪಂತ್‌ ಹಾಗೂ ಕೆ.ಎಲ್‌ ರಾಹುಲ್‌ ಅರ್ಧಶತಕಗಳ ನೆರವಿನಿಂದ ಭಾರತ 2ನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗೆ 427 ರನ್ ‌ಗಳಿಸಿ ಡಿಕ್ಲೇರ್‌ ಮಾಡಿಕೊಂಡಿದ್ದು ಇಂಗ್ಲೆಂಡ್‌ಗೆ 608 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿದೆ.

ತನ್ನ 2ನೇ ಇನ್ನಿಂಗ್ಸ್‌ ನಲ್ಲಿ ಭಾರತ 1 ವಿಕೆಟ್‌ ನಷ್ಟಕ್ಕೆ 64 ರನ್‌ ಗಳಿಸಿ 244 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು. 4ನೇ ದಿನ ಆಂಗ್ಲರ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಭಾರತ ತಂಡ 6 ವಿಕೆಟ್‌ ನಷ್ಟಕೆ 427 ರನ್‌ ಗಳಿಸಿ, ಇಂಗ್ಲೆಂಡ್‌ಗೆ 608 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿದೆ.

ತನ್ನ 2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪರ ಶುಭಮನ್‌ ಗಿಲ್‌ 161 ರನ್‌ (162 ಎಸೆತ, 8 ಸಿಕ್ಸರ್‌, 13 ಬೌಂಡರಿ) ಗಳಿಸಿದರೆ, ರಿಷಭ್‌ ಪಂತ್‌ 65 ರನ್‌, ರವೀಂದ್ರ ಜಡೇಜಾ ಅಜೇಯ 69 ರನ್‌, ಕೆ.ಎಲ್‌ ರಾಹುಲ್‌‌ 55 ರನ್‌, ಜೈಸ್ವಾಲ್‌ 28 ರನ್‌, ಕರುಣ್‌ ನಾಯರ್‌ 26 ರನ್‌, ನಿತೀಶ್‌ ರೆಡ್ಡಿ 1 ರನ್‌ ಗಳಿಸಿದರು. ವಾಷಿಂಗ್ಟನ್‌ ಸುಂದರ್‌ 12 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

ದಾಖಲೆ ಬರೆದ ಶುಭ್ಮನ್ ಗಿಲ್ ಶತಕ

ಗಿಲ್ ಅವರ 369 ರನ್‌ಗಳ ಪಂದ್ಯದ ಮೊತ್ತವು ಟೆಸ್ಟ್‌ನಲ್ಲಿ ಭಾರತೀಯ ಆಟಗಾರ ಗಳಿಸಿದ ಅತಿ ಹೆಚ್ಚು ರನ್‌ಗಳ ಹೊಸ ದಾಖಲೆಯನ್ನು ನಿರ್ಮಿಸಿದೆ. 1971 ರಲ್ಲಿ ಪೋರ್ಟ್-ಆಫ್-ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗವಾಸ್ಕರ್ ಅವರ 344 ರನ್‌ಗಳ ದಾಖಲೆಯನ್ನು ಮುರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT