ವೈಭವ್ ಸೂರ್ಯವಂಶಿ 
ಕ್ರಿಕೆಟ್

IND vs ENG U-19: 52 ಎಸೆತಗಳಲ್ಲಿ ಶತಕ; ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ!

ಶನಿವಾರ ವೋರ್ಸೆಸ್ಟರ್‌ನಲ್ಲಿ ನಡೆದ ಆತಿಥೇಯ ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧದ ನಾಲ್ಕನೇ ಯೂತ್ ಏಕದಿನ ಪಂದ್ಯದಲ್ಲಿ 52 ಎಸೆತಗಳ ಶತಕ ಸಿಡಿಸಿದ್ದಾರೆ.

ವೋರ್ಸೆಸ್ಟರ್‌: ಐಪಿಎಲ್ ನಲ್ಲಿ ಗುಜರಾತ್ ವಿರುದ್ಧ ಅತಿ ವೇಗದಲ್ಲಿ ಶತಕ ಗಳಿಸುವ ಮೂಲಕ ದೇಶಾದ್ಯಂತ ರಾತ್ರೋ ರಾತ್ರಿ ಪ್ರಸಿದ್ಧಿಯಾಗಿದ್ದ ಭಾರತದ 14 ವರ್ಷದ ವೈಭವ್ ಸೂರ್ಯವಂಶಿ ಇದೀಗ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಯೂತ್ ಏಕದಿನ ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸುವ ವಿಶ್ವದಾಖಲೆ ಬರೆದಿದ್ದಾರೆ.

ಶನಿವಾರ ವೋರ್ಸೆಸ್ಟರ್‌ನಲ್ಲಿ ನಡೆದ ಆತಿಥೇಯ ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧದ ನಾಲ್ಕನೇ ಯೂತ್ ಏಕದಿನ ಪಂದ್ಯದಲ್ಲಿ 52 ಎಸೆತಗಳ ಶತಕ ಸಿಡಿಸಿದ್ದಾರೆ. ಈ ಮೂಲಕ ಪುರುಷರ ಯೂತ್ ಏಕದಿನ ಪಂದ್ಯದಲ್ಲಿ ವೇಗದ ಶತಕ ಸಿಡಿಸಿದ ಪಾಕಿಸ್ತಾನದ ಕಮ್ರಾಮ್ ಗುಲಾಮ್ ಅವರ ದಾಖಲೆಯನ್ನು ಹಿಂದಿಕ್ಕಿದ್ದರು.

ಕೊನೆಗೆ 78 ಎಸೆತಗಳಲ್ಲಿ 143 ರನ್ ಗಳಿಸಿದ ಸೂರ್ಯವಂಶಿ ಅವರನ್ನು ಬೇನ್ ಮೇಯಸ್ ಔಟ್ ಮಾಡಿದರು. ಅವರು 13 ಬೌಂಡರಿ ಹಾಗೂ 10 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಇಲ್ಲಿಯವರೆಗಿನ ನಾಲ್ಕು ಪಂದ್ಯಗಳಲ್ಲಿ 306 ರನ್ ಗಳಿಸುವ ಮೂಲಕ ಸರಣಿಯಲ್ಲಿ ಅತಿ ಹೆಚ್ಚಿನ ರನ್ ಗಳಿಸಿರುವ ಪ್ರಮುಖ ಆಟಗಾರ ಕೂಡಾ ಆಗಿದ್ದಾರೆ.

ಹಿಂದಿನ ಪಂದ್ಯದಲ್ಲಿ ಯೂತ್ ಏಕದಿನ ಪಂದ್ಯಗಳಲ್ಲಿ ವೇಗವಾಗಿ ಅರ್ಧ ಶತಕ ಗಳಿಸಿದ ರಿಷಭ್ ಪಂತ್ ಅವರ ದಾಖಲೆ ಮುರಿಯುವಲ್ಲಿ ಸ್ವಲ್ಪ ದೂರ ಉಳಿದರು. ಪಂತ್ 2016 ರಲ್ಲಿ ನೇಪಾಳ ವಿರುದ್ಧ ಕೇವಲ 18 ಎಸೆತಗಳಲ್ಲಿ ವೇಗವಾಗಿ ಅರ್ಧ ಶತಕ ಬಾರಿಸಿದ್ದರು. ಸೂರ್ಯವಂಶಿ 20 ಎಸೆತಗಳಲ್ಲಿ ಅರ್ಧ ಶತಕ ಗಳಿಸಿದರು. ಮೂರನೇ ಯೂತ್ ಏಕದಿನ ಪಂದ್ಯದಲ್ಲಿ ಸೂರ್ಯವಂಶಿ 31 ಎಸೆತಗಳಲ್ಲಿ ಆರು ಬೌಂಡರಿ, 9 ಸಿಕ್ಸರ್ ಗಳೊಂದಿಗೆ 86 ರನ್ ಗಳಿಸಿದರು.

2025 ಐಪಿಎಲ್ ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಅತ್ಯುತ್ತಮ ಬ್ಯಾಟರ್ ಆಗಿ ಹೊರಹೊಮ್ಮಿದ್ದ ಸೂರ್ಯವಂಶಿ ಕೇವಲ ಏಳು ಪಂದ್ಯಗಳಲ್ಲಿ ಒಂದು ಶತಕ ಮತ್ತು ಅರ್ಧಶತಕದೊಂದಿಗೆ 252 ರನ್ ಗಳಿಸಿದ್ದರು. ಅದರಲ್ಲೂ ಜೈಪುರದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧದ ಅವರ ಸ್ಫೋಟಕ ಶತಕಕ್ಕೆ ಕ್ರಿಕೆಟ್ ಜಗತ್ತು ನಿಬ್ಬೆರಗಾಗಿತ್ತು. ಸೂರ್ಯವಂಶಿ ಕೇವಲ 38ಎಸೆತಗಳಲ್ಲಿ 101 ರನ್ ಗಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT