ಬರ್ಮಿಂಗ್ಹ್ಯಾಮ್: ಬರ್ಮಿಂಗ್ಹ್ಯಾಮ್ ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಭಾರತ- ಇಂಗ್ಲೆಂಡ್ ನಡುವಿನ 2 ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ.
336 ರನ್ ಗಳ ಅಂತರದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ 608 ರನ್‌ಗಳ ಗುರಿಯನ್ನು ಪಡೆದ ಇಂಗ್ಲೆಂಡ್ ತಂಡ 5ನೇ ದಿನದಾಟದಲ್ಲಿ 68.1 ಓವರ್‌ಗಳಲ್ಲಿ 271 ರನ್‌ಗಳಿಸಿ ಸರ್ವಪತನ ಕಂಡಿತು.
336 ರನ್‌ಗಳ ಜಯ ಭಾರತದ ಹೊರಗಡೆ ಟೀಂ ಇಂಡಿಯಾಗೆ ಸಿಕ್ಕಿದ ದೊಡ್ಡ ಜಯವಾಗಿದ್ದು ಶುಭಮನ್ ನಾಯಕತ್ವದ ಎರಡನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.
ಭಾರತದ ಪರ ಆಕಾಶ್ ದೀಪ್ ಮೊದಲ ಬಾರಿಗೆ 6 ವಿಕೆಟ್ ಪಡೆದರೆ. ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಪ್ರಸಿದ್ದ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದರು. ಈ ಗೆಲುವಿನ ಮೂಲಕ ಭಾರತ ತಂಡ ಸರಣಿಯಲ್ಲಿ ಸಮಬಲ ಸಾಧಿಸಿದೆ.
ಸ್ಕೋರ್ ವಿವರ
ಭಾರತ ಮೊದಲ ಇನ್ನಿಂಗ್ಸ್ -587/10
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ -407/10
ಭಾರತ ಎರಡನೇ ಇನ್ನಿಂಗ್ಸ್ – 427/6 ಡಿಕ್ಲೇರ್
ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ – 271/10