ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಆಂಗ್ಲರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಲಂಡನ್ ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿವೆ.
ಇಂದು ಆರಂಭವಾಗಿರುವ ಐತಿಹಾಸಿಕ ಪಂದ್ಯ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಲು ಉಭಯ ತಂಡಗಳು ಹವಣಿಸುತ್ತಿವೆ.
ತಂಡಕ್ಕೆ ವಾಪಸ್ ಆದ ಬುಮ್ರಾ.. ಪ್ರಸಿದ್ಧ್ ಕೃಷ್ಣಗೆ ವಿಶ್ರಾಂತಿ
ಇನ್ನು ಕಳೆದ ಪಂದ್ಯದಲ್ಲಿ ದುಬಾರಿಯಾಗಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣಾಗೆ ಈ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದ್ದು, ಜಸ್ ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ.
ಉಳಿದಂತೆ ಎಡ್ಜ್ ಬ್ಯಾಸ್ಚನ್ ನಲ್ಲಿ ಆಡಿದ್ದ ಅದೇ ತಂಡವನ್ನು ಉಳಿಸಿಕೊಳ್ಳಲಾಗಿದೆ. ಅತ್ತ ಇಂಗ್ಲೆಂಡ್ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ಟಂಗ್ ಬದಲಿಗೆ ಜೋಫ್ರಾ ಆರ್ಚರ್ ಕಣಕ್ಕಿಳಿದಿದ್ದಾರೆ.
ತಂಡಗಳು ಇಂತಿವೆ
ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭ್ಮನ್ ಗಿಲ್(ನಾಯಕ), ರಿಷಭ್ ಪಂತ್(ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಇಂಗ್ಲೆಂಡ್: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್(ನಾಯಕ), ಜೇಮೀ ಸ್ಮಿತ್(ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಶೋಯೆಬ್ ಬಶೀರ್