ಮ್ಯಾಂಚೆಸ್ಟರ್: ಬುಧವಾರ ಇಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಬೌಲಿಂಗ್ ಆಯ್ದುಕೊಂಡರು.
ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತ ತಂಡವು ತನ್ನ ಪ್ಲೇಯಿಂಗ್ XI ನಲ್ಲಿ ಮೂರು ಬದಲಾವಣೆಗಳನ್ನು ಮಾಡಿದೆ. ಕನ್ನಡಿಗ ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ ಮತ್ತು ಆಕಾಶ್ ದೀಪ್ ಬದಲಿಗೆ ಸಾಯಿ ಸುದರ್ಶನ್, ಶಾರ್ದೂಲ್ ಠಾಕೂರ್ ಮತ್ತು ಅನ್ಶುಲ್ ಕಾಂಬೋಜ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಲಾರ್ಡ್ಸ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೈಗೆ ಗಾಯ ಮಾಡಿಕೊಂಡಿದ್ದ ಸ್ಪಿನ್ನರ್ ಶೋಯೆಬ್ ಬಶೀರ್ ಬದಲಿಗೆ ಲಿಯಾಮ್ ಡಾಸನ್ ಅವರನ್ನು ಇಂಗ್ಲೆಂಡ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.
ಇಂಗ್ಲೆಂಡ್ ಸದ್ಯ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಸರಣಿಯನ್ನು ಜೀವಂತವಾಗಿಟ್ಟುಕೊಳ್ಳಲು ಭಾರತ ಈ ಪಂದ್ಯವನ್ನು ಗೆಲ್ಲಲೇಬೇಕಿರುವ ಅನಿವಾರ್ಯತೆಗೆ ಸಿಲುಕಿದೆ.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅನ್ಶುಲ್ ಕಾಂಬೋಜ್.
ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಲಿಯಾಮ್ ಡಾಸನ್, ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್.