ಪಂಜಾಬ್ ಕಿಂಗ್ಸ್ ತಂಡ 
ಕ್ರಿಕೆಟ್

IPL 2025: ಪಂಜಾಬ್ ಕಿಂಗ್ಸ್‌ಗೆ ಸಿಹಿಸುದ್ದಿ; MI ವಿರುದ್ಧದ ಕ್ವಾಲಿಫೈಯರ್ 2; ತಂಡಕ್ಕೆ ಬೌಲರ್ ವಾಪಸ್

ಪಂದ್ಯಾವಳಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಪಂಜಾಬ್ ಕಿಂಗ್ಸ್ ತಂಡವು ಕ್ವಾಲಿಫೈಯರ್ 1ರಲ್ಲಿ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಕಂಡಿತ್ತು.

ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಪಂಜಾಬ್ ಕಿಂಗ್ಸ್ (PBKS) ಮತ್ತು ಮುಂಬೈ ಇಂಡಿಯ್ಸ್ (MI) ನಡುವೆ ಕ್ವಾಲಿಫೈಯರ್ 2 ಪಂದ್ಯ ನಡೆಯಲಿದ್ದು, ವಿಜೇತ ತಂಡ ಜೂನ್ 3ರಂದು ನಡೆಯಲಿರುವ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಸೆಣಸಲಿದೆ. ಈ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಇದೀಗ ಸಿಹಿಸುದ್ದಿ ಲಭ್ಯವಾಗಿದೆ. ಗಾಯದಿಂದಾಗಿ ಕಳೆದ ಎರಡು ಪಂದ್ಯಗಳಲ್ಲಿ ಹೊರಗುಳಿದಿದ್ದ ಪಿಬಿಕೆಎಸ್ ಲೆಗ್-ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಎಂಐ ವಿರುದ್ಧದ ಪಂದ್ಯದಲ್ಲಿ ಆಟಲಿದ್ದಾರೆ.

ರೆವ್‌ಸ್ಪೋರ್ಟ್ಜ್‌ನಲ್ಲಿನ ವರದಿ ಪ್ರಕಾರ, ಯುಜ್ವೇಂದ್ರ ಚಾಹಲ್ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಆಡಲಿದ್ದಾರೆ.

ಮತ್ತೊಂದೆಡೆ, ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದ ದೀಪಕ್ ಚಾಹರ್ ಕೂಡ ತಂಡಕ್ಕೆ ಮರಳುವ ಸಾಧ್ಯತೆ ಇದೆ. ವರದಿ ಪ್ರಕಾರ, ವೇಗಿ ಸಹಾಯಕ ಸಿಬ್ಬಂದಿ ಮತ್ತು ಕೋಚ್ ಮಹೇಲ ಜಯವರ್ಧನೆ ಅವರೊಂದಿಗೆ ಕೆಲವು ಫಿಟ್ನೆಸ್ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಯುಜ್ವೇಂದ್ರ ಚಾಹಲ್ ಪಂಜಾಬ್ ತಂಡದೊಂದಿಗೆ ಅಭ್ಯಾಸದಲ್ಲಿ ತೊಡಗಿರುವುದು ಕಂಡುಬಂದಿದೆ.

ಪಂದ್ಯಾವಳಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಪಂಜಾಬ್ ಕಿಂಗ್ಸ್ ತಂಡವು ಕ್ವಾಲಿಫೈಯರ್ 1ರಲ್ಲಿ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಕಂಡಿತ್ತು. ಇದೀಗ ಫೈನಲ್ ತಲುಪಲು ಕ್ವಾಲಿಫೈಯರ್ 2ನಲ್ಲಿ ಗೆದ್ದೇ ಗೆಲ್ಲುವ ಅನಿವಾರ್ಯತೆ ಇದೆ. ಪಂಜಾಬ್ ಪರವಾಗಿ ದೀಪಕ್ ಚಾಹರ್ 14 ಪಂದ್ಯಗಳಲ್ಲಿ 9.17 ಎಕಾನಮಿಯಲ್ಲಿ 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಯುಜ್ವೇಂದ್ರ ಚಾಹಲ್ 12 ಪಂದ್ಯಗಳಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಮೇ 26 ರಂದು ಜೈಪುರದಲ್ಲಿ ನಡೆದ ಲೀಗ್ ಹಂತದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಮುಖಾಮುಖಿಯಲ್ಲಿ ಪಂಜಾಬ್ ತಂಡ 7 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಆ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕ ವ್ಯರ್ಥವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT