ಇಂದಿರಾ ಕ್ಯಾಂಟೀನ್ ಸಾಂದರ್ಭಿಕ ಚಿತ್ರ 
ಕ್ರಿಕೆಟ್

IPL Final Match: RCB ಗೆದ್ದರೆ ಮೈಸೂರಿನ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಹೋಳಿಗೆ ಊಟಕ್ಕೆ ಸಿದ್ಧತೆ!

ಮೈಸೂರಿನ ಆರ್​ಸಿಬಿಯ ಅಪ್ಪಟ ಅಭಿಮಾನಿ ಆಗಿರುವ ಬಸವರಾಜ ಬಸಪ್ಪ ಫೈನಲ್​ ಪಂದ್ಯಕ್ಕೂ ಒಂದು ದಿನ ಮೊದಲು, ಗನ್ ಹೌಸ್ ವೃತ್ತದಲ್ಲಿರುವ ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತವಾಗಿ ಹೋಳಿಗೆ ಊಟ ಹಾಕಿಸಿದ್ದಾರೆ..

ಮೈಸೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸತತ 18 ವರ್ಷಗಳ ಕನಸು ನನಸು ಆಗಲು ಇನ್ನೊಂದು ಹೆಜ್ಜೆ ಮಾತ್ರ ಬಾಕಿಯಿದೆ. ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಆರ್ ಸಿಬಿ ಪ್ರಶಸ್ತಿ ಎತ್ತಿಹಿಡಿಯುವುದು ನಿಶ್ಚಿತ ಎಂಬುದು ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ, ನಂಬಿಕೆಯಾಗಿದೆ.

ನಾಳೆ ನಡೆಯಲಿರುವ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್​ ನಡುವಿನ ಫೈನಲ್​​ನಲ್ಲಿ ಆರ್​ಸಿಬಿ ಗೆಲುವಿಗಾಗಿ ಕೆಲವು ಕಡೆಗಳಲ್ಲಿ ವಿಶೇಷ ಪೂಜೆ, ಪುನಸ್ಕಾರಗಳು ನಡೆಯುತ್ತಿವೆ. ಈ ಮಧ್ಯೆ ಈ ಬಾರಿ ಆರ್ ಸಿಬಿ ಗೆದ್ದರೆ ಉಚಿತ ಹೋಳಿಗೆ ಊಟ ಹಾಕಿಸಲಾಗುವುದು ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ.

ಹೌದು. ಮೈಸೂರಿನ ಆರ್​ಸಿಬಿಯ ಅಪ್ಪಟ ಅಭಿಮಾನಿ ಆಗಿರುವ ಬಸವರಾಜ ಬಸಪ್ಪ ಫೈನಲ್​ ಪಂದ್ಯಕ್ಕೂ ಒಂದು ದಿನ ಮೊದಲು, ಗನ್ ಹೌಸ್ ವೃತ್ತದಲ್ಲಿರುವ ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತವಾಗಿ ಹೋಳಿಗೆ ಊಟ ಹಾಕಿಸಿದ್ದಾರೆ.

ನಾಳೆ ಫೈನಲ್​ನಲ್ಲಿ ಆರ್​ಸಿಬಿ ಟ್ರೋಫಿ ಎತ್ತಿ ಹಿಡಿದರೆ ಮೈಸೂರಿನ ಎಲ್ಲಾ 16 ಇಂದಿರಾ ಕ್ಯಾಂಟೀನ್​ಗಳಲ್ಲೂ ಉಚಿತ ಹೋಳಿಗೆ ಊಟ ಹಾಕಿಸಲು ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಬಳಿ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್​ಗಳಲ್ಲೂ‌‌ ಇದೇ ರೀತಿ ಉಚಿತ ಹೋಳಿಗೆ ಊಟ ಹಾಕಿಸಲಿ. ಗೆದ್ದ ಸಂಭ್ರಮದಲ್ಲಿ ಎಲ್ಲರೂ ಸಿಹಿ ಊಟ ಸವಿಯಲಿ. ಗೆಲುವಿನ ಸಂಭ್ರಮ ಹಂಚಿಕೊಳ್ಳಲಿ ಅಂತ ಬಸವರಾಜ ಬಸಪ್ಪ ಸೇರಿದಂತೆ ಆರ್​ಸಿಬಿ ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ