ಕ್ರಿಕೆಟ್

Video: ಕೈ ಕುಯ್ದುಕೊಂಡು ವಿರಾಟ್ ಕೊಹ್ಲಿ ಫೋಟೊ ಮೇಲೆ 'ರಕ್ತ ತಿಲಕ' ಇಟ್ಟ ಅಭಿಮಾನಿ!

ಅಭಿಮಾನಿಯ ಈ ಹುಚ್ಚು ಕೃತ್ಯಕ್ಕೆ ಬಳಕೆದಾರರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಈ ವಿಡಿಯೋ X ನಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೊಚ್ಚಲ ಟ್ರೋಫಿ ಗೆದ್ದಿದ್ದು, ಈ ಗೆಲುವನ್ನು ವಿಶ್ವದಾದ್ಯಂತ ಅಭಿಮಾನಿಗಳು ಆಚರಿಸಿದ್ದಾರೆ. ಭಾರತದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ಬೆಂಗಳೂರು ಮೂಲದ ಫ್ರಾಂಚೈಸಿ, ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಆರು ರನ್‌ಗಳಿಂದ ಸೋಲಿಸಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. 18 ವರ್ಷಗಳ ಕಾಲ ತಂಡ ಹಾಗೂ ಅಭಿಮಾನಿಗಳ ಕಾಯುವಿಕೆ ಅಂತ್ಯಗೊಂಡಿತು. ಪಿಬಿಕೆಎಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿದ ಕ್ಷಣದಲ್ಲಿ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಭಾವುಕರಾಗಿ ಮೈದಾನದಲ್ಲಿಯೇ ಕಣ್ಣೀರಾಕಿದರು.

ಆರ್‌ಸಿಬಿಯ ಗೆಲುವು ದೇಶದಾದ್ಯಂತ ಭಾರಿ ಸಂಭ್ರಮಾಚರಣೆಗೆ ಕಾರಣವಾಯಿತು. ಅಂತಹ ಒಂದು ಉದಾಹರಣೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಭಿಮಾನಿಯೊಬ್ಬರು ವಿರಾಟ್ ಕೊಹ್ಲಿ ಅವರ ಪೋಸ್ಟರ್‌‌ಗೆ 'ರಕ್ತ ತಿಲಕ' ಇಟ್ಟಿರುವುದು ಕಂಡುಬಂದಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಆರ್‌ಸಿಬಿ ಅಭಿಮಾನಿಯೊಬ್ಬರು ತಮ್ಮ ಕೈಯನ್ನು ಹರಿತವಾದ ವಸ್ತುವಿನಿಂದ ಗಾಯ ಮಾಡಿಕೊಂಡಿದ್ದು, ಕೈಯಿಂದ ಸುರಿದ ರಕ್ತದಿಂದ ಕೊಹ್ಲಿಯ ಪೋಸ್ಟರ್‌ಗೆ ತಿಲಕ ಇಟ್ಟಿರುವುದು ಕಂಡುಬಂದಿದೆ.

ಅಭಿಮಾನಿಯ ಈ ಹುಚ್ಚು ಕೃತ್ಯಕ್ಕೆ ಬಳಕೆದಾರರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಈ ವಿಡಿಯೋ X ನಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಬುಧವಾರ ಮುಂಜಾನೆ ಬೆಂಗಳೂರಿನಲ್ಲಿ ಆರ್‌ಸಿಬಿ ತಂಡಕ್ಕೆ ಅಭೂತಪೂರ್ವ ಸ್ವಾಗತ ದೊರೆಯಿತು. ಆದರೆ, ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಅಭಿಮಾನಿಗಳು ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಸಂಭ್ರಮಾಚರಣೆ ವೇಳೆ ಉಂಟಾದ ದುರಂತದಿಂದಾಗಿ, ವಿಜಯೋತ್ಸವ ಆಚರಣೆಗೆ ಮಾರ್ಗಸೂಚಿಗಳನ್ನು ಪರಿಚಯಿಸಲು ಬಿಸಿಸಿಐ ಈಗ ಯೋಚಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?