ವಾಶಿಂಗ್ಟನ್ ಸುಂದರ್ ಎಸೆತದಲ್ಲಿ ಸಿಕ್ಸ್ ಬಾರಿಸಿದ ರಿಷಭ್ ಪಂತ್ 
ಕ್ರಿಕೆಟ್

ಅಭ್ಯಾಸದ ವೇಳೆ ಭರ್ಜರಿ ಸಿಕ್ಸ್ ಬಾರಿಸಿದ ರಿಷಭ್ ಪಂತ್; ಕ್ರೀಡಾಂಗಣದ ಛಾವಣಿಯೇ ಪುಡಿಪುಡಿ! ವಿಡಿಯೋ

ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ತಂಡದ ಇನ್‌ಸ್ಟಾಗ್ರಾಂ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಹಲವಾರು ಆಟಗಾರರು ಅಭ್ಯಾಸದಲ್ಲಿ ತೊಡಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಅಭಿಯಾನದಲ್ಲಿ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್, ಇದೀಗ ಮತ್ತೆ ತಮ್ಮ ಗತಿಗೆ ಮರಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ ಆರಂಭವಾಗುವ ಮುನ್ನ ವಾಷಿಂಗ್ಟನ್ ಸುಂದರ್ ಅವರನ್ನು ನೆಟ್‌ನಲ್ಲಿ ಎದುರಿಸಿದ ಪಂತ್, ಬೃಹತ್ ಸಿಕ್ಸರ್ ಸಿಡಿಸಿದ್ದಾರೆ. ಇದರಿಂದಾಗಿ ಕ್ರೀಡಾಂಗಣದ ಛಾವಣಿಗೆ ಹಾನಿಯಾಗಿದೆ. ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಪರ ಐಪಿಎಲ್ 2025ರ ಆವೃತ್ತಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಶತಕ ಬಾರಿಸಿದ ಪಂತ್ ಅವರಿಗೆ ಟೆಸ್ಟ್ ಉಪನಾಯಕನ ಸ್ಥಾನವನ್ನು ನೀಡಲಾಗಿದೆ.

ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ತಂಡದ ಇನ್‌ಸ್ಟಾಗ್ರಾಂ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ನಾಯಕ ಶುಭಮನ್ ಗಿಲ್, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ರವೀಂದ್ರ ಜಡೇಜಾ ಸೇರಿದಂತೆ ಹಲವಾರು ಆಟಗಾರರು ಅಭ್ಯಾಸದಲ್ಲಿ ತೊಡಗಿದ್ದಾರೆ.

ಮುಖ್ಯ ಕೋಚ್ ಗೌತಮ್ ಗಂಭೀರ್ ಸೇರಿದಂತೆ ಕೋಚಿಂಗ್ ಸಿಬ್ಬಂದಿ ಆಟಗಾರರೊಂದಿಗೆ ಮಾತನಾಡುತ್ತಾ, ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿರುವಾಗ ಮಾರ್ಗದರ್ಶನ ನೀಡುತ್ತಿದ್ದರು.

ಬ್ಯಾಟಿಂಗ್ ಅಭ್ಯಾಸ ಮಾಡಿದ ಆಟಗಾರರಲ್ಲಿ ಗಿಲ್ ಮತ್ತು ಪಂತ್ ಇದ್ದರು. ಆದರೆ, ಸಿರಾಜ್ ಮತ್ತು ಬುಮ್ರಾ ಬಾಲ್‌ಗಳನ್ನು ಎಸೆಯುತ್ತಿರುವುದು ಕಂಡುಬಂದಿತು. ತಂಡವು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ನೇತೃತ್ವದಲ್ಲಿ ಕೆಲವು ಫೀಲ್ಡಿಂಗ್ ಅಭ್ಯಾಸದಲ್ಲಿ ತೊಡಗಿತು.

ಇನ್‌ಸ್ಟಾಗ್ರಾಂನಲ್ಲಿ ಇಎಸ್‌ಪಿಎನ್‌ಕ್ರಿಕ್‌ಇನ್ಫೊ ವಿಡಿಯೋದ ಪ್ರಕಾರ, ಈ ಅಭ್ಯಾಸದ ಬಹುಪಾಲು ಭಾಗವು ಬುಮ್ರಾ ಮತ್ತು ನಾಯಕ ಗಿಲ್ ನಡುವಿನ ಮುಖಾಮುಖಿಯಾಗಿತ್ತು. ಗಿಲ್ ವಿರುದ್ಧ ಬುಮ್ರಾ ಅತ್ಯುತ್ತಮ ಪ್ರದರ್ಶನ ನೀಡಿದರು.

ಈ ಅವಧಿಯಲ್ಲಿ ಮತ್ತೊಂದು ಆಕರ್ಷಕ ದೃಶ್ಯವೆಂದರೆ, ವಾಷಿಂಗ್ಟನ್ ಸುಂದರ್ ಎಸೆತದಲ್ಲಿ ಪಂತ್ ಅವರು ಬೃಹತ್ ಸಿಕ್ಸರ್ ಬಾರಿಸಿದರು. ಇದು ಬೆಕೆನ್‌ಹ್ಯಾಮ್‌ನಲ್ಲಿರುವ ಸ್ಟೇಡಿಯಂನ ಛಾವಣಿಯ ಒಂದು ಭಾಗ ಮುರಿದಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಈ ಸರಣಿಯು ಜೂನ್‌ನಿಂದ ಆಗಸ್ಟ್ 2025ರವರೆಗೆ ನಡೆಯಲಿದ್ದು, ಲೀಡ್ಸ್‌ನ ಹೆಡಿಂಗ್ಲೆ, ಬರ್ಮಿಂಗ್ಹ್ಯಾಮ್‌ನ ಎಡ್ಜ್ ಬಾಸ್ಟನ್, ಲಂಡನ್‌ನ ಲಾರ್ಡ್ಸ್ ಮತ್ತು ದಿ ಓವಲ್ ಮತ್ತು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಪಂದ್ಯಗಳನ್ನು ನಿಗದಿಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT