ಕೋಚ್ ಗೌತಮ್ ಗಂಭೀರ್ 
ಕ್ರಿಕೆಟ್

India vs England: ತಾಯಿಗೆ ಹೃದಯಾಘಾತ; ಲಂಡನ್ ನಿಂದ ಭಾರತಕ್ಕೆ Gautam Gambhir ದೌಡು

ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಭಾರತ ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್ ಇಂಗ್ಲೆಂಡ್ ಪ್ರವಾಸ ಮೊಟಕು ಗೊಳಿಸಿ ಭಾರತಕ್ಕೆ ವಾಪಸ್ ಆಗಿದ್ದಾರೆ.

ನವದೆಹಲಿ: ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ತಾಯಿಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.

ಹೌದು.. ಜೂನ್ 11 ರಂದು ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಭಾರತ ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್ ಇಂಗ್ಲೆಂಡ್ ಪ್ರವಾಸ ಮೊಟಕು ಗೊಳಿಸಿ ಭಾರತಕ್ಕೆ ವಾಪಸ್ ಆಗಿದ್ದಾರೆ. ಗಂಭೀರ್ ಅವರ ತಾಯಿಗೆ ಹೃದಯಾಘಾತವಾದ ಹಿನ್ನಲೆಯಲ್ಲಿ ಗಂಭೀರ್ ಭಾರತಕ್ಕೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ಗಂಭೀರ್ ಅವರ ತಾಯಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣದಿಂದಾಗಿ ಶುಭ್ಮನ್ ಗಿಲ್ ನೇತೃತ್ವದ ಯುವ ಭಾರತ ತಂಡದ ಇಂಗ್ಲೆಂಡ್ ಪ್ರವಾಸ ಮಧ್ಯೆ ಗಂಭೀರ್ ಭಾರತಕ್ಕೆ ಮರಳಿದ್ದಾರೆ. ಅವರು ಯಾವಾಗ ಇಂಗ್ಲೆಂಡ್‌ಗೆ ಹಿಂತಿರುಗುತ್ತಾರೆ ಎಂಬುದು ಇನ್ನೂ ತಿಳಿದಿಲ್ಲ. ಆದಾಗ್ಯೂ ಅವರ ನಿರ್ಧಾರವು ತಾಯಿಯವರ ಆರೋಗ್ಯ ಹೇಗಿದೆ ಎಂಬುದರ ಮೇಲೆ ಅವಲಂಬಿತವಾಗಿರಬಹುದು ಎಂದು ಹೇಳಲಾಗಿದೆ.

ಶುಭ್​ಮನ್ ಗಿಲ್ ಅವರ ನಾಯಕತ್ವದಲ್ಲಿ ಯುವ ಭಾರತ ತಂಡವನ್ನು ಕಟ್ಟಿಕೊಂಡು ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್​ಗೆ ಹಾರಿದ್ದ ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಇದೀಗ ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ತಂಡವನ್ನು ತೊರೆದು ಭಾರತಕ್ಕೆ ಮರಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಜೂನ್ 20 ರಂದು ಆರಂಭವಾಗಲಿದ್ದು, ಸರಣಿಯ ಆರಂಭಿಕ ಪಂದ್ಯ ಹೆಡಿಂಗ್ಲಿಯಲ್ಲಿ ಆರಂಭವಾಗಲಿದೆ. ತಂಡದ ಹಿರಿಯ ಆಟಗಾರರಾದ ಆರ್ ಅಶ್ವಿನ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತರಾಗಿದ್ದು, ಇದೀಗ ಈ ತ್ರಿವಳಿ ಆಟಗಾರರಿಲ್ಲದೇ ತಂಡ ಮೊದಲ ಬಾರಿಗೆ ವಿದೇಶಿ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುತ್ತಿದೆ. ಇದೀಗ ಗಾಯದ ಮೇಲೆ ಬರೆ ಎಂಬಂತೆ ಕೋಚ್ ಗಂಭೀರ್ ಕೂಡ ತುರ್ತು ಪರಿಸ್ಥಿತಿಯಿಂದಾಗಿ ತಂಡ ತೊರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ