ಕಾಲ್ತುಳಿತ ಸಂಭವಿಸಿದ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟಿನ ಮುಂಭಾಗದ ಚಿತ್ರ 
ಕ್ರಿಕೆಟ್

ಬೆಂಗಳೂರು ಕಾಲ್ತುಳಿತದಂತಹ ಘಟನೆ ತಪ್ಪಿಸಲು ಮಾರ್ಗಸೂಚಿ; ಮೂವರು ಸದಸ್ಯರ ಸಮಿತಿ ರಚಿಸಿದ BCCI

ಸೈಕಿಯಾ ಅಲ್ಲದೇ, ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಖಜಾಂಚಿ ಪ್ರಭತೇಜ್ ಸಿಂಗ್ ಭಾಟಿಯಾ ಸಮಿತಿಯ ಇತರ ಸದಸ್ಯರಾಗಿದ್ದಾರೆ.

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತದಂತಹ ಘಟನೆಗಳನ್ನು ತಡೆಯುವ ಉದ್ದೇಶದಿಂದ ಮಾರ್ಗಸೂಚಿಗಳನ್ನು ರೂಪಿಸಲು ಬಿಸಿಸಿಐ ಶನಿವಾರ ಕಾರ್ಯದರ್ಶಿ ದೇವಜಿತ್ ಸೈಕಿಯಾ ನೇತೃತ್ವದಲ್ಲಿ ಮೂವರ ಸದಸ್ಯರ ಸಮಿತಿಯನ್ನು ರಚಿಸಿದೆ.

ಸೈಕಿಯಾ ಅಲ್ಲದೇ, ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಖಜಾಂಚಿ ಪ್ರಭತೇಜ್ ಸಿಂಗ್ ಭಾಟಿಯಾ ಸಮಿತಿಯ ಇತರ ಸದಸ್ಯರಾಗಿದ್ದಾರೆ. ಇದು 15 ದಿನಗಳಲ್ಲಿ ಮಾರ್ಗಸೂಚಿಗಳನ್ನು ರೂಪಿಸುತ್ತದೆ.

ಬೆಂಗಳೂರಿನಲ್ಲಿ ನಡೆದ ಸಂಭ್ರಮಾಚರಣೆ ಸಂದರ್ಭದಲ್ಲಿ ಸಂಭವಿಸಿದ ಘಟನೆಯ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಇಂತಹ ಘಟನೆ ತಡೆಯುವ ಉದ್ದೇಶದಿಂದ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸಲು ಸಮಿತಿಯನ್ನು ರಚಿಸಲು ಉನ್ನತ ಸಮಿತಿ (Apex Council) ನಿರ್ಧರಿಸಿದೆ ಎಂದು ಬಿಸಿಸಿಐ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ 4 ರಂದು ಆರ್‌ಸಿಬಿ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಭಾಗವಹಿಸಲು ಸುಮಾರು 2.5 ಲಕ್ಷ ಜನರು ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜಮಾಯಿಸಿದ್ದಾಗ ಉಂಟಾದ ಕಾಲ್ತುಳಿತದಿಂದಾಗಿ 11 ಅಭಿಮಾನಿಗಳು ಸಾವನ್ನಪ್ಪಿದರು ಮತ್ತು 56 ಮಂದಿ ಗಾಯಗೊಂಡಿದ್ದರು.

ಆರ್‌ಸಿಬಿ ಮತ್ತು ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​ವಿರುದ್ಧ FIR ದಾಖಲಾಗಿರುವುದರಿಂದ ಕರ್ನಾಟಕ ಹೈಕೋರ್ಟ್ ಈ ವಿಷಯದ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ಆಯೋಗವನ್ನು ರಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್