ಬಿಸಿಸಿಐ ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಮಧ್ಯಸ್ಥಿಕೆ ತೀರ್ಪನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್: ಕೊಚ್ಚಿ ಟಸ್ಕರ್ಸ್ ಗೆ ರೂ. 538 ಕೋಟಿ ಪಾವತಿಸುವಂತೆ BCCI ಗೆ ಸೂಚನೆ

ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿ ಆರ್ . ಚಾಗ್ಲಾ ಅವರಿದ್ದ ಏಕ ಸದಸ್ಯ ಪೀಠ ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು.

ಮುಂಬೈ: ಈಗ ರದ್ದಾಗಿರುವ ಕೇರಳದ ಐಪಿಎಲ್ ಫ್ರಾಂಚೈಸಿ ಕೊಚ್ಚಿ ಟಸ್ಕರ್ಸ್ ಗೆ ರೂ. 538 ಕೋಟಿ ಪಾವತಿಸುವಂತೆ ಬಿಸಿಸಿಐಗೆ ಬಾಂಬೆ ಹೈಕೋರ್ಟ್ ಸೂಚಿಸಿದೆ.

ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಬಿಸಿಸಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿ ಆರ್ . ಚಾಗ್ಲಾ ಅವರಿದ್ದ ಏಕ ಸದಸ್ಯ ಪೀಠ, ಕೇರಳದ ಐಪಿಎಲ್ ಫ್ರಾಂಚೈಸಿ ಕೊಚ್ಚಿ ಟಸ್ಕರ್ಸ್ ಗೆ ರೂ. 538 ಕೋಟಿ ಪಾವತಿಸುವಂತೆ ಸೂಚಿಸುವ ಮೂಲಕ ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು.

2010ರ ಐಪಿಎಲ್ ನಲ್ಲಿ ಭಾಗವಹಿಸಿದ್ದ ಕೊಚ್ಚಿ ಟಸ್ಕರ್ಸ್ ತಂಡವನ್ನು ಫ್ರಾಂಚೈಸಿ ಒಪ್ಪಂದ ಉಲ್ಲಂಘನೆ ಆರೋಪದ ಮೇಲೆ ಸೆಪ್ಟೆಂಬರ್ 2011ರಲ್ಲಿ ಬಿಸಿಸಿಐ ವಜಾಗೊಳಿಸಿತ್ತು.

ಈ ತಂಡವನ್ನು ಮೊದಲು RSW ಒಕ್ಕೂಟ ತದನಂತರ ಕೊಚ್ಚಿ ಕ್ರಿಕೆಟ್ ಪ್ರೈವೇಟ್ ಲಿಮಿಟೆಡ್ (ಕೆಸಿಪಿಎಲ್ ) ನಿರ್ವಹಿಸಿತ್ತು. ಬಿಸಿಸಿಐ ವಿರುದ್ಧ 2012ರಲ್ಲಿ ಕೆಸಿಪಿಎಲ್ ಮತ್ತು RSW ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದವು.

2015ರಲ್ಲಿ ತೀರ್ಪು ನೀಡಿದ್ದ ನ್ಯಾಯಾಲಯ, ಕೆಸಿಪಿಎಲ್ ಗೆ ರೂ. 384.8 ಕೋಟಿ ಹಾಗೂ RSWಗೆ ಬಡ್ತಿ ಸಮೇತ ರೂ. 153.3 ಕೋಟಿ ಮರಳಿಸುವಂತೆ ಆದೇಶಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್