ಇಂಗ್ಲೆಂಡ್ ಆಟಗಾರರು 
ಕ್ರಿಕೆಟ್

England vs India ಮೊದಲ ಟೆಸ್ಟ್, ಎರಡನೇ ದಿನ: 471ಕ್ಕೆ ಭಾರತ ಆಲೌಟ್

ಮೊದಲ ದಿನದಾಟದ ಅಂತ್ಯಕ್ಕೆ ಭಾರತ ಮೂರು ವಿಕೆಟ್ ನಷ್ಟಕ್ಕೆ 359 ರನ್ ಗಳಿಸಿತ್ತು. ಇಂದು 112 ರನ್ ಮಾತ್ರ ಗಳಿಸಿ ಸರ್ವ ಪತನ ಕಂಡಿತು.

ಲೀಡ್ಸ್: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಹಿನ್ನಡೆ ಅನುಭವಿಸಿದ ಭಾರತ 471 ರನ್‌ಗಳಿಗೆ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಳ್ಳುವ ಮೂಲಕ ಮೊದಲ ಇನ್ನಿಂಗ್ಸ್ ಮುಗಿಸಿದೆ.

ಲೀಡ್ಸ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ನಾಯಕ ಶುಭಮನ್ ಗಿಲ್ ಸೇರಿದಂತೆ ತಂಡದ ಮೂವರು ಆಟಗಾರರು ಶತಕದ ನೆರವಿನಿಂದ 471ಕ್ಕೆ ಆಲೌಟ್ ಆಗಿದೆ.

ಮೊದಲ ದಿನದಾಟದ ಅಂತ್ಯಕ್ಕೆ ಭಾರತ ಮೂರು ವಿಕೆಟ್ ನಷ್ಟಕ್ಕೆ 359 ರನ್ ಗಳಿಸಿತ್ತು. ಇಂದು 112 ರನ್ ಮಾತ್ರ ಗಳಿಸಿ ಸರ್ವ ಪತನ ಕಂಡಿತು. ರಿಷಭ್ ಪಂತ್ ಶತಕ ಸಿಡಿಸಿದರೂ, ಉಳಿದವರ ಪ್ರದರ್ಶನ ನಿರಾಸೆ ಮೂಡಿಸಿತು.

ಎರಡನೇ ದಿನದಾಟದಲ್ಲಿ ರಿಷಭ್ ಪಂತ್ ಭರ್ಜರಿ ಶತಕ ಸಿಡಿಸಿದನ್ನು ಬಿಟ್ಟರೆ, ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ. ಹೀಗಾಗಿ ಒಂದು ಹಂತದಲ್ಲಿ 600 ರನ್ ಕಲೆಹಾಕುವ ಸೂಚನೆ ನೀಡಿದ್ದ ಭಾರತ ತಂಡ ದಿಢೀರ ಕುಸಿತ ಕಂಡಿತು.

ಭಾರತದ ಪರ ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್ ಮತ್ತು ರಿಷಭ್ ಪಂತ್ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದರೆ, ಕೆಎಲ್ ರಾಹುಲ್ 42 ರನ್​ಗಳ ಕಾಣಿಕೆ ನೀಡಿದರು. ಈ ನಾಲ್ವರು ಬ್ಯಾಟ್ಸ್‌ಮನ್‌ಗಳನ್ನು ಹೊರತುಪಡಿಸಿ, ಬೇರೆ ಯಾರೂ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

ಇಂಗ್ಲೆಂಡ್ ಪರ, ನಾಯಕ ಬೆನ್ ಸ್ಟೋಕ್ಸ್ ಮತ್ತು ವೇಗಿ ಜೋಶ್ ಟಂಗ್ ತಲಾ ನಾಲ್ಕು ವಿಕೆಟ್‌ಗಳನ್ನು ಪಡೆದರೆ, ಬ್ರೈಡನ್ ಕಾರ್ಸೆ ಮತ್ತು ಶೋಯೆಬ್ ಬಶೀರ್ ತಲಾ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT