MS ಧೋನಿ ದಾಖಲೆ ಮುರಿದ ರಿಷಬ್ ಪಂತ್ 
ಕ್ರಿಕೆಟ್

SENA Encounter: Rishab Pant ಅಬ್ಬರಕ್ಕೆ ಮಾಜಿ ನಾಯಕ MS Dhoni ದಾಖಲೆ ಛಿದ್ರ!

ಭಾರತದ ಪರ ಯಶಸ್ವಿ ಜೈಸಾಲ್ ಮತ್ತು ನಾಯಕ ಶುಭ್ ಮನ್ ಗಿಲ್ ಶತಕ ಸಿಡಿಸಿದರೆ, ರಿಷಬ್ ಪಂತ್ ಅಜೇಯ 65 ರನ್ ಗಳಿಸಿ 2ನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಲೀಡ್ಸ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಮೇಲುಗೈ ಸಾಧಿಸಿದ್ದು, ಭಾರತದ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರಿಷಬ್ ಪಂತ್ (Rishab Pant) ಅತ್ಯಪರೂಪದ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ.

ಹೌದು.. ಇಂಗ್ಲೆಂಡ್ ನ ಲೀಡ್ಸ್ ನ ಹೆಡಿಂಗ್ಲೇ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ತಂಡ ಸಂಪೂರ್ಣ ಮೇಲುಗೈ ಸಾಧಿಸಿದ್ದು, ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 359 ರನ್ ಗಳಿಸಿ ಬೃಹತ್ ಮೊತ್ತದತ್ತ ದಾಪುಗಾಲಿರಿಸಿದೆ.

ಭಾರತದ ಪರ ಯಶಸ್ವಿ ಜೈಸಾಲ್ ಮತ್ತು ನಾಯಕ ಶುಭ್ ಮನ್ ಗಿಲ್ ಶತಕ ಸಿಡಿಸಿದರೆ, ರಿಷಬ್ ಪಂತ್ ಅಜೇಯ 65 ರನ್ ಗಳಿಸಿ 2ನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಬ್ ಪಂತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಪಂತ್ 102 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ ಅಜೇಯ 65 ರನ್ ಕಲೆಹಾಕಿದರು. ಆ ಮೂಲಕ ಪಂತ್ ಅಪರೂಪದ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ.

3000 ರನ್ ಗಳಿಕೆ, SENA Encounter ನಲ್ಲಿ ಯಶಸ್ವಿ ವಿಕೆಟ್ ಕೀಪರ್ ಬ್ಯಾಟರ್

ಇನ್ನು ಮೊದಲ ಇನ್ನಿಂಗ್ಸ್ ನಲ್ಲಿ ಅಜೇಯ 65 ರನ್ ಗಳಿಕೆಯೊಂದಿಗೆ ಪಂತ್ ತಮ್ಮ ಟೆಸ್ಟ್ ಕ್ರಿಕೆಟ್ ರನ್ ಗಳಿಕೆಯನ್ನು 3 ಸಾವಿರಕ್ಕೆ ಏರಿಕೆ ಮಾಡಿಕೊಂಡರು. ಅಂತೆಯೇ SENA ವಿರುದ್ಧದ ಪಂದ್ಯಗಳಲ್ಲಿ ಭಾರತದ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಬ್ಯಾಟರ್ ಎಂದೆನಿಸಿಕೊಂಡರು.

ಪಂತ್ ಈಗ SENAದಲ್ಲಿ ನಡೆದ 27 ಪಂದ್ಯಗಳಲ್ಲಿ 38.80 ಸರಾಸರಿಯಲ್ಲಿ 1746 ರನ್ ಗಳಿಸಿದ್ದಾರೆ. ಅವರ ಹೆಸರಿನಲ್ಲಿ ನಾಲ್ಕು ಶತಕಗಳು ಮತ್ತು ಆರು ಅರ್ಧಶತಕಗಳಿವೆ. SENA (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) ದೇಶಗಳಲ್ಲಿ ಭಾರತದ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ಪಂತ್ ಹಿಂದಿಕ್ಕಿದರು.

Most Test runs in SENA by Asian Wicket Keeper

  • 1732 - Rishab Pant*

  • 1731 - MS Dhoni

  • 1099 - F Engineer

  • 850 - Mohd Rizwan

  • 831 - Dinesh Chandimal

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT