ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಸೆಮಿಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದು, ಮಂಗಳವಾರ ಇಲ್ಲಿ ನಡೆಯುತ್ತಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಆಸ್ಟ್ರೇಲಿಯ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಿದೆ. ಗಾಯಗೊಂಡಿರುವ ಮ್ಯಾಥ್ಯೂಸ್ ಶಾರ್ಟ್ ಬದಲಿಗೆ ಕೂಪರ್ ಕೊನೊಲಿ ಅವಕಾಶ ನೀಡಿದ್ದು, ಸ್ಪೆನ್ಸರ್ ಜಾನ್ಸನ್ ಬದಲಿಗೆ ತನ್ವೀರ್ ಸಂಘರನ್ನು ಕರೆತಂದಿದೆ.
ಭಾರತವು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿನ ಪ್ಲೇಯಿಂಗ್ XI ಅನ್ನೇ ಕಣಕ್ಕಿಳಿಸಿದೆ.
ಲೀಗ್ ಹಂತದಲ್ಲಿ ಎರಡೂ ತಂಡಗಳು ಸೋಲು ಕಂಡಿಲ್ಲ. ಆಸ್ಟ್ರೇಲಿಯಾ ಆಡಿದ ಮೂರು ಪಂದ್ಯಗಳಲ್ಲಿ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ, ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಮತ್ತೊಂದು ಪಂದ್ಯ ಅರ್ಧಕ್ಕೆ ನಿಂತಿದ್ದರಿಂದ ಒಂದೊಂದು ಅಂಕವನ್ನು ಹಂಚಿಕೊಂಡಿತ್ತು.
ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಹಿರಿಯ ಆಟಗಾರ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುತ್ತಿದ್ದಾರೆ. 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಸೋತಿದ್ದ ಭಾರತಕ್ಕೆ ಇದೀಗ ಸೇಡು ತೀರಿಸಿಕೊಳ್ಳುವ ಅವಕಾಶ ಸಿಕ್ಕಿದೆ.
ಉಭಯ ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.
ಆಸ್ಟ್ರೇಲಿಯಾ: ಕೂಪರ್ ಕೊನೊಲಿ, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶಾನೆ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ತನ್ವೀರ್ ಸಂಘ