ಭಾರತ vs ಆಸ್ಟ್ರೇಲಿಯಾ ಸೆಮಿ ಫೈನಲ್ ಪಂದ್ಯ 
ಕ್ರಿಕೆಟ್

Champions Trophy 2025: ಮೊದಲ ಸೆಮಿಫೈನಲ್; ಭಾರತಕ್ಕೆ ಗೆಲ್ಲಲು ಆಸ್ಟ್ರೇಲಿಯಾ 265 ರನ್ ಟಾರ್ಗೆಟ್

ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್ ನಲ್ಲಿ 264 ರನ್ ಗಳಿಸಿ ಆಲೌಟ್ ಆಯಿತು.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭಾರತಕ್ಕೆ ಗೆಲ್ಲಲು 265ರನ್ ಸವಾಲಿನ ಗುರಿ ನೀಡಿದೆ.

ಇಂದು ದುಬೈನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್ ನಲ್ಲಿ 264 ರನ್ ಗಳಿಸಿ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 39ರನ್ ಗಳಿಸಿದೆ, ನಾಯಕ ಸ್ಟೀವೆನ್ ಸ್ಮಿತ್ 73 ರನ್, ಲಾಬುಶ್ಟಾನ್29ರನ್ ಮತ್ತು ಅಲೆಕ್ಸ್ ಕ್ಯಾರಿ 61 ರನ್ ಗಳಿಸಿದರು.

ಅಂತಿಮ ಹಂತದಲ್ಲಿ ಅಲೆಕ್ಸ್ ಕ್ಯಾರಿ ಗಳಿಸಿದ ನಿರ್ಣಾಯಕ ರನ್ ಗಳ ನೆರವಿನಿಂದ ಆಸ್ಟ್ರೇಲಿಯಾ 260ರ ಗಡಿ ದಾಟಿತು. ಅಂತಿಮವಾಗಿ ಆಸಿಸ್ 49.3 ಓವರ್ ನಲ್ಲಿ 264 ರನ್ ಗಳಿಸಿ ಆಲೌಟ್ ಆಯಿತು.

ಭಾರತದ ಪರ ಮಹಮದ್ ಶಮಿ 3 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT