ಸ್ಮಿತ್ ಔಟ್ ಗೆ ಗಂಭೀರ್ ಆಕ್ರೋಶ 
ಕ್ರಿಕೆಟ್

ICC Champions Trophy 2025: ಆಸಿಸ್ ನಾಯಕ Gone, ಕೋಚ್ Gautam Gambhir ಆಕ್ರೋಶ, ಕಾರಣ?

ಒಂದು ಹಂತದಲ್ಲಿ ಆಸ್ಟ್ರೇಲಿಯಾ ಉತ್ತಮ ಸ್ಥಿತಿಯಲ್ಲಿತ್ತು. ಟ್ರಾವಿಸ್ ಹೆಡ್ ಬೇಗನೆ ಔಟಾದರೂ ನಾಯಕ ಸ್ಮಿತ್ ಉತ್ತಮ ಲಯದಲ್ಲಿದ್ದರು.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ಸೆಣಸುತ್ತಿದ್ದು, ಈ ಪಂದ್ಯದಲ್ಲಿ ಆಟಗಾರರು ಮಾತ್ರವಲ್ಲ ಕೋಚ್ ಗೌತಮ್ ಗಂಭೀರ್ ಕೂಡ ಕ್ರೋಧಗೊಂಡ ಘಟನೆ ನಡೆಯಿತು.

ದುಬೈನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್ ನಲ್ಲಿ 264 ರನ್ ಗಳಿಸಿ ಆಲೌಟ್ ಆಯಿತು.

ಒಂದು ಹಂತದಲ್ಲಿ ಆಸ್ಟ್ರೇಲಿಯಾ ಉತ್ತಮ ಸ್ಥಿತಿಯಲ್ಲಿತ್ತು. ಟ್ರಾವಿಸ್ ಹೆಡ್ ಬೇಗನೆ ಔಟಾದರೂ ನಾಯಕ ಸ್ಮಿತ್ ಉತ್ತಮ ಲಯದಲ್ಲಿದ್ದರು. ಅವರು 96 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ 73 ರನ್ ಕಲೆಹಾಕಿದರು.

ಸ್ಮಿತ್ ಆಟ ಒಂದು ಹಂತದಲ್ಲಿ ಭಾರತಕ್ಕೆ ಅಪಾಯಕಾರಿಯಾಗಿ ಪರಿಣಮಿಸಿತ್ತು. ಇದೇ ವೇಳೆ ಶಮಿ 37ನೇ ಓವರ್ ನಲ್ಲಿ ಔಟ್ ಮಾಡಿದರು.

ಗಂಭೀರ್ ಆಕ್ರೋಶ

ಉತ್ತಮ ಪ್ರದರ್ಶನ ನೀಡಿ ಭಾರತಕ್ಕೆ ಕಂಟಕವಾಗಿದ್ದ ಸ್ಮಿತ್ ಔಟಾಗುತ್ತಿದ್ದಂತೆಯೇ ಡಗೌಟ್ ನಲ್ಲಿದ್ದ ಕೋಚ್ ಗಂಭೀರ್ ತೀವ್ರ ಆಕ್ರೋಶ ತೋರಿದರು. ಅಪಾಯಕಾರಿಯಾಗಿದ್ದ ಸ್ಮಿತ್ ಕೊನೆಗೂ ಔಟ್ ಆದರಲ್ಲ ಎಂದು ಆಕ್ರೋಶ ಭರಿತರಾಗಿ ಬೈಗುಳ ಬೈದರು. ಈ ಕುರಿತ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಒಂದು ವೇಳೆ ಶಮಿ ಸ್ಮಿತ್ ರನ್ನು ಔಟಾಗಿರದಿದ್ದರೆ ಆಸಿಸ್ ಮೊತ್ತ ಮತ್ತಷ್ಟು ಹೆಚ್ಚಾಗುವ ಅಪಾಯವಿತ್ತು. ಆದರೆ ಸೂಕ್ತ ಸಂದರ್ಭದಲ್ಲಿ ಸ್ಮಿತ್ ಔಟಾಗುವ ಮೂಲಕ ಭಾರತ ನಿಟ್ಟಿಸಿರು ಬಿಟ್ಟಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT