ಭಾರತ ತಂಡ ಮತ್ತು ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು 
ಕ್ರಿಕೆಟ್

Champions Trophy 2025: ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ Kohli; ಫೈನಲ್ ದುಬೈಗೆ ಶಿಫ್ಟ್!

ಬರೊಬ್ಬರಿ 2 ದಶಕಗಳ ಬಳಿಕ ತನ್ನ ದೇಶದಲ್ಲಿ ಐಸಿಸಿ ಟೂರ್ನಿ ಆಯೋಜಿಸಿತ್ತು. ಆದರೆ ಭಾರತ ಸರ್ಕಾರ ಮತ್ತು ಬಿಸಿಸಿಐ ನಿಲುವಿನಿಂದಾಗಿ ಪಾಕಿಸ್ತಾನದಲ್ಲಿ ಆಯೋಜಿಸಬೇಕಿದ್ದ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಹೈಬ್ರಿಡ್ ಮಾದರಿಗೆ ಬದಲಾಯಿತು.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿ ಫೈನಲ್ ನಲ್ಲಿ ಭಾರತ ತಂಡವನ್ನು ಗೆಲ್ಲಿಸುವ ಮೂಲಕ ರನ್ ಮೆಷಿನ್ ವಿರಾಟ್ ಕೊಹ್ಲಿ ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟಿದ್ದು, ಆಸ್ಟ್ರೇಲಿಯಾ ಸೋಲಿನೊಂದಿಗೆ ಟೂರ್ನಿಯ ಫೈನಲ್ ಪಂದ್ಯ ಇದೀಗ ದುಬೈಗೆ ಸ್ಥಳಾಂತರವಾಗಿದೆ.

ಹೌದು.. ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜನೆ ವಿಚಾರವಾಗಿ ಮೊದಲಿನಿಂದಲೂ ಭಾರತದ ವಿರುದ್ಧ ಕಾಲು ಕೆರೆಯುತ್ತಿದ್ದ ಪಾಕಿಸ್ತಾನಕ್ಕೆ ತಕ್ಕಶಾಸ್ತಿಯಾಗಿದ್ದು, ಬರೊಬ್ಬರಿ 2 ದಶಕಗಳ ಬಳಿಕ ತನ್ನ ದೇಶದಲ್ಲಿ ಐಸಿಸಿ ಟೂರ್ನಿ ಆಯೋಜಿಸಿತ್ತು. ಆದರೆ ಭಾರತ ಸರ್ಕಾರ ಮತ್ತು ಬಿಸಿಸಿಐ ನಿಲುವಿನಿಂದಾಗಿ ಪಾಕಿಸ್ತಾನದಲ್ಲಿ ಆಯೋಜಿಸಬೇಕಿದ್ದ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಹೈಬ್ರಿಡ್ ಮಾದರಿಗೆ ಬದಲಾಯಿತು.

ಅದರಂತೆ ದುಬೈ ಮತ್ತು ಪಾಕಿಸ್ತಾನದ ಕ್ರೀಡಾಂಗಣಗಳಲ್ಲಿ ಟೂರ್ನಿ ಆಯೋಜನೆಯಾಯಿತು. ಆದರೆ ಟೂರ್ನಿ ಆರಂಭವಾದ ಐದೇ ದಿನಗಳಲ್ಲಿ ಪಾಕಿಸ್ತಾನ ತಂಡ ಟೂರ್ನಿಯಿಂದ ಹೊರಬಿದಿತ್ತು. ಭಾರತದ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ಸೋತು ಟೂರ್ನಿಯಿಂದಲೇ ಹೊರಬಿತ್ತು. ಇದೀಗ ಆಸ್ಟ್ರೇಲಿಯಾದ ವಿರುದ್ಧ ಭಾರತ ಜಯ ಗಳಿಸುವ ಮೂಲಕ ಚಾಂಪಿಯನ್ಸ್ ಟ್ರೋಫಿ ಟೂರ್ನಿಯೇ ಪಾಕಿಸ್ತಾನದಿಂದ ಹೊರಹೋಗುವಂತೆ ಮಾಡಿದೆ.

ನಾಳೆ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ 2ನೇ ಸೆಮಿ ಫೈನಲ್ ಪಂದ್ಯವೇ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಅಂತಿಮ ಪಂದ್ಯವಾಗಿರಲಿದೆ. ನಾಳೆ ಗೆಲ್ಲುವ ತಂಡ ದುಬೈಗೆ ಆಗಮಿಸಿ ಇಲ್ಲಿ ಭಾರತ ತಂಡದೊಂದಿಗೆ ಫೈನಲ್ ಪಂದ್ಯವನ್ನಾಡಲಿದೆ.

ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ Kohli

ಇನ್ನು ಪಾಕಿಸ್ತಾನದ ಆಸೆಗೆ ಅಕ್ಷರಶಃ ಕೊಳ್ಳಿ ಇಟ್ಟಿದ್ದು ಮಾತ್ರ ಭಾರತದ ರನ್ ಮೆಶಿನ್ ವಿರಾಟ್ ಕೊಹ್ಲಿ. ಅಂದು ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಅದರ ಗೆಲುವು ಕಸಿದ ಕೊಹ್ಲಿ ಇಂದೂ ಕೂಡ ಪ್ರಬಲ ಆಸ್ಟ್ರೇಲಿಯನ್ನರ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿ ಭಾರತಕ್ಕೆ ಗೆಲುವು ತಂದುಕೊಟ್ಟರು. ಆ ಮೂಲಕ ಪಾಕಿಸ್ತಾನಿಯರ ಆಸೆಗೆ ತಡೆಯಾದರು. ಒಂದು ವೇಳೆ ಇಂದು ಆಸ್ಟ್ರೇಲಿಯಾ ಗೆದ್ದಿದ್ದರೆ ಫೈನಲ್ ಪಂದ್ಯ ಪಾಕಿಸ್ತಾನದಲ್ಲೇ ನಡೆಯುತ್ತಿತ್ತು. ಪಾಪ ಪಾಕಿಸ್ತಾನಿಯರ ಆ ಅಂತಿಮ ಆಸೆಯನ್ನೂ ಕೊಹ್ಲಿ ಕಸಿದುಕೊಂಡತಾಗಿದೆ.

ಚಾಂಪಿಯನ್ಸ್ ಟ್ರೋಫಿಗೆ 18 ಬಿಲಿಯನ್ ಹಣ ಖರ್ಚು

ಇನ್ನು ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜನೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಬರೊಬ್ಬರಿ 18 ಬಿಲಿಯನ್ ಹಣ ಖರ್ಚು ಮಾಡಿದೆ. ಮೈದಾನಗಳ ನವೀಕರಣಕ್ಕೆ ಈ ಹಣ ಬಳಕೆಯಾಗಿದ್ದು ಆದರೆ ಇದೀಗ ಅಷ್ಟು ಹಣ ಖರ್ಚು ಮಾಡಿದರೂ ಪಾಕಿಸ್ತಾನದಲ್ಲಿ ಫೈನಲ್ ಪಂದ್ಯ ನಡೆಯುತ್ತಿಲ್ಲ ಎಂದು ಪಾಕ್ ಕ್ರಿಕೆಟ್ ಅಭಿಮಾನಿಗಳು ಕೊರಗುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಭೂಕಬಳಿಕೆ ಆರೋಪದ ನಡುವೆ ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?