ನ್ಯೂಜಿಲೆಂಡ್ ಬೃಹತ್ ಮೊತ್ತ 
ಕ್ರಿಕೆಟ್

ICC Champions Trophy 2025: ನ್ಯೂಜಿಲೆಂಡ್ ಬ್ಯಾಟಿಂಗ್ ಅಬ್ಬರ; ಇತಿಹಾಸದ ಗರಿಷ್ಠ ಮೊತ್ತ, ಆಫ್ರಿಕಾಗೆ ಗೆಲ್ಲಲು 363 ರನ್ ಬೃಹತ್ ಗುರಿ

ಲಾಹೋರ್ ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿ ಬೃಹತ್ ಮೊತ್ತ ಪೇರಿಸಿದೆ.

ಲಾಹೋರ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯ 2ನೇ ಸೆಮಿ ಫೈನಲ್ ನಲ್ಲಿ ನ್ಯೂಜಿಲೆಂಡ್ ತಂಡ ಅಬ್ಬರ ಬ್ಯಾಟಿಂಗ್ ಪ್ರದರ್ಶನ ತೋರಿದ್ದು, ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಮೊದಲ ಬಾರಿಗೆ ಗರಿಷ್ಠ ಮೊತ್ತ ಪೇರಿಸಿದೆ.

ಹೌದು.. ಲಾಹೋರ್ ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿ ಬೃಹತ್ ಮೊತ್ತ ಪೇರಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ ಆರು ವಿಕೆಟ್‌ಗಳಿಗೆ 362 ರನ್ ಗಳಿಸಿತು.

ನ್ಯೂಜಿಲೆಂಡ್ ಪರ ಕೇನ್ ವಿಲಿಯಮ್ಸನ್ ಮತ್ತು ರಚಿನ್ ರವೀಂದ್ರ ಅಬ್ಬರ ಶತಕ ಸಿಡಿಸಿದರು. ಆ ಮೂಲಕ ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 363 ರನ್‌ಗಳ ಗುರಿಯನ್ನು ನೀಡಿದೆ.

ನ್ಯೂಜಿಲೆಂಡ್ ಪರ ರಚಿನ್ ರವೀಂದ್ರ ಕೇವಲ 101 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 13 ಬೌಂಡರಿಗಳ ನೆರವಿನಿಂದ 108 ಪೇರಿಸಿದರೆ, 94 ಎಸೆತಗಳನ್ನು ಎದುರಿಸಿದ ಕೇನ್ ವಿಲಿಯಮ್ಸನ್ 2 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ 102 ರನ್ ಕಲೆಹಾಕಿದರು.

ಅಂತಿಮ ಹಂತದಲ್ಲಿ ಡರಿಲ್ ಮಿಚೆಲ್ (49 ರನ್) ಮತ್ತು ಗ್ಲೆನ್ ಫಿಲಿಪ್ಸ್ (ಅಜೇಯ 49 ರನ್) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಕಿವೀಸ್ ಮೊತ್ತ 350ರ ಗಡಿ ದಾಟುವಂತೆ ನೋಡಿಕೊಂಡರು. ಅಂತಿಮವಾಗಿ ನ್ಯೂಜಿಲೆಂಡ್ ತಂಡ ನಿಗಧಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 362 ರನ್ ಕಲೆಹಾಕಿ ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 363 ರನ್‌ಗಳ ಗುರಿಯನ್ನು ನೀಡಿದೆ.

ಅಂತೆಯೇ ಈ ಮೊತ್ತ ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ದಾಖಲಾದ ಅತ್ಯಧಿಕ ಮೊತ್ತವಾಗಿದೆ. ಈ ಹಿಂದೆ ಇದೇ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 351 ರನ್ ಕಲೆಹಾಕಿತ್ತು. ಇದೀಗ ನ್ಯೂಜಿಲೆಂಡ್ ತಂಡ 362 ರನ್ ಕಲೆಹಾಕಿ ಈ ದಾಖಲೆ ಮುರಿದಿದೆ.

  • Highest first innings totals in Champions Trophy
    362/6 - NZ vs SA, Lahore, 2025 SF
    351/8 - ENG vs AUS, Lahore, 2025 (lost)
    347/4 - NZ vs USA, The Oval, 2017
    338/4 - PAK vs IND, The Oval, 2017 Final
    331/7 - IND vs SA, Cardiff, 2013

ದಕ್ಷಿಣ ಆಫ್ರಿಕಾ ವಿರುದ್ಧ ಸತತ 2ನೇ ಬಾರಿಗೆ 300ಕ್ಕೂ ಅಧಿಕ ರನ್

ಅಂತೆಯೇ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾ ವಿರುದ್ದ ಏಕದಿನ ಕ್ರಿಕೆಟ್ ನಲ್ಲಿ ಸತತ 2ನೇ ಬಾರಿಗೆ 300ಕ್ಕೂ ಅಧಿಕ ರನ್ ಕಲೆಹಾಕಿದೆ. ಕಳೆದ ತಿಂಗಳು ತ್ರಿಕೋನ ಸರಣಿಯಲ್ಲಿ ಇದೇ ಮೈದಾನದಲ್ಲಿ 305 ರನ್‌ಗಳ ಗುರಿಯನ್ನು ನ್ಯೂಜಿಲೆಂಡ್ ಯಶಸ್ನಿಯಾಗಿ ಬೆನ್ನು ಹತ್ತಿತ್ತು. ಅಂದೂ ಕೂಡ ಕೇನ್ ವಿಲಿಯಮ್ಸನ್ ಅಜೇಯ 133 ರನ್ ಕಲೆಹಾಕಿ ತಂಡಕ್ಕೆ ಜಯ ತಂದಿತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT