ಹರ್ಮನ್‌ಪ್ರೀತ್ ಕೌರ್ 
ಕ್ರಿಕೆಟ್

WPL 2025, MI vs UPW: ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ದಂಡ!

ಪಂದ್ಯದ ಸಮಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅವರು ಯುಪಿ ವಾರಿಯರ್ಸ್ ತಂಡದ ಸೋಫಿ ಎಕಲ್‌ಸ್ಟನ್ ಅವರೊಂದಿಗೂ ಜಗಳವಾಡಿದರು.

ಲಖನೌ: ಇಲ್ಲಿನ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ನಡೆದ ಪಂದ್ಯದ ವೇಳೆ ಅಂಪೈರ್ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಶುಕ್ರವಾರ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.

ಯುಪಿ ವಾರಿಯರ್ಸ್ ಇನಿಂಗ್ಸ್‌ನ 19ನೇ ಓವರ್‌ನ ಕೊನೆಯಲ್ಲಿ ಅಂಪೈರ್ ಅಜಿತೇಶ್ ಅರ್ಗಲ್ ನಿಧಾನಗತಿಯ ಓವರ್ ರೇಟ್‌ನಿಂದಾಗಿ ಅಂತಿಮ ಓವರ್‌ನಲ್ಲಿ ಕೇವಲ ಮೂವರು ಫೀಲ್ಡರ್‌ಗಳು ಮೈದಾನದಲ್ಲಿ ಇರಲು ಸಾಧ್ಯ ಎಂದು ಅಂಪೈರ್ ಅಜಿತೇಶ್ ಅರ್ಗಲ್ ಹರ್ಮನ್‌ಪ್ರೀತ್‌ಗೆ ತಿಳಿಸಿದರು.

ಇದರಿಂದ ಅತೃಪ್ತರಾದ ಹರ್ಮನ್‌ಪ್ರೀತ್ ಅಂಪೈರ್ ಜೊತೆ ಕೆಲಕಾಲ ವಾಗ್ವಾದ ನಡೆಸಿದ್ದು ಕಂಡುಬಂತು. ತಂಡದ ಸಹ ಆಟಗಾರ್ತಿ ಅಮೆಲಿಯಾ ಕೆರ್ ಕೂಡ ಈ ಚರ್ಚೆಯಲ್ಲಿ ಭಾಗವಹಿಸಿದರು.

'ಹರ್ಮನ್‌ಪ್ರೀತ್ ಕೌರ್ ಪಂದ್ಯದ ಸಮಯದಲ್ಲಿ ಅಂಪೈರ್ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಆರ್ಟಿಕಲ್ 2.8 ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಮಾಡಿದ್ದಾರೆ. ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ' ಎಂದು WPL ಪ್ರಕಟಣೆಯಲ್ಲಿ ತಿಳಿಸಿದೆ.

ಪಂದ್ಯದ ಸಮಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅವರು ಯುಪಿ ವಾರಿಯರ್ಸ್ ತಂಡದ ಸೋಫಿ ಎಕಲ್‌ಸ್ಟನ್ ಅವರೊಂದಿಗೂ ಜಗಳವಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ