ದೇಶಾದ್ಯಂತ ಸಂಭ್ರಮಾಚರಣೆ ಚಿತ್ರ 
ಕ್ರಿಕೆಟ್

3ನೇ ಬಾರಿಗೆ ಚಾಂಫಿಯನ್ಸ್ ಟ್ರೋಫಿ ಗೆದ್ದ ಏಕೈಕ ತಂಡ ಭಾರತ: ದೇಶಾದ್ಯಂತ ಸಂಭ್ರಮಾಚರಣೆ!

ರಾಷ್ಟ್ರ ರಾಜಧಾನಿ ನವದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ ಸೇರಿದಂತೆ ರಾಷ್ಟ್ರದ ವಿವಿಧ ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ತ್ರಿವರ್ಣ ಧ್ವಜ ಹಿಡಿದು ರಸ್ತೆಗಿಳಿದು, ಟೀಂ ಇಂಡಿಯಾ ಪರ ಘೋಷಣೆ ಕೂಗುವ ಮೂಲಕ ಸಂಭ್ರಮಿಸಿದ್ದಾರೆ.

ನವದೆಹಲಿ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ICC ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕೀವಿಸ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿ ಭಾರತ ಟ್ರೋಫಿ ಗೆಲ್ಲುತ್ತಿದ್ದಂತೆಯೇ ದೇಶಾದ್ಯಂತ ಸಂಭ್ರಮಾಚರಣೆಯ ಕಟ್ಟೆಯೊಡೆಯಿತು.

ರಾಷ್ಟ್ರ ರಾಜಧಾನಿ ನವದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ ಸೇರಿದಂತೆ ರಾಷ್ಟ್ರದ ವಿವಿಧ ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ತ್ರಿವರ್ಣ ಧ್ವಜ ಹಿಡಿದು ರಸ್ತೆಗಿಳಿದು, ಟೀಂ ಇಂಡಿಯಾ ಪರ ಘೋಷಣೆ ಕೂಗುವ ಮೂಲಕ ಸಂಭ್ರಮಿಸಿದ್ದಾರೆ.

ಹರ್ಷೋದ್ಗಾರಗಳೊಂದಿಗೆ ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಿಹಿ ಹಂಚಿ ಸಂಭ್ರಮಪಟ್ಟಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ನೀಡಿದ್ದ 252 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಭಾರತ ತಂಡ 49 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 254 ರನ್ ಗಳಿಸಿ 4 ವಿಕೆಟ್ ಗಳ ಅಂತರದಲ್ಲಿ ಗೆದ್ದು ಬೀಗಿತು. ಆ ಮೂಲಕ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಗೆ ಮುತ್ತಿಟ್ಟಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ