ಭಾರತದ ಪ್ರಭಾವಿ ಬೌಲಿಂಗ್ 
ಕ್ರಿಕೆಟ್

Champions Trophy 2025 Final: ಭಾರತ ಪರಿಣಾಮಕಾರಿ ಬೌಲಿಂಗ್; ಟೀಂ ಇಂಡಿಯಾ ಗೆಲುವಿಗೆ ಸವಾಲಿನ ಗುರಿ ನೀಡಿದ ನ್ಯೂಜಿಲೆಂಡ್

ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ವಿಲ್ ಯಂಗ್ ರನ್ನು ಔಟ್ ಮಾಡಿ ಭಾರತಕ್ಕೆ ಮೊದಲ ಮುನ್ನಡೆ ತಂದಿತ್ತರು. ಬಳಿಕ 37 ರನ್ ಗಳಿಸಿ ಅಪಾಯಕಾರಿಯಾಗುತ್ತಿದ್ದ ರಚಿನ್ ರವೀಂದ್ರ ಕುಲದೀಪ್ ಯಾದವ್ ರ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಪ್ರಭಾವಿ ಬೌಲಿಂಗ್ ಎದುರು ಮಂಕಾದ ನ್ಯೂಜಿಲೆಂಡ್ ತಂಡ ಭಾರತ ತಂಡಕ್ಕೆ ಗೆಲ್ಲಲು 252 ರನ್ ಗಳ ಸವಾಲಿನ ಗುರಿ ನೀಡಿದೆ.

ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಕಿವೀಸ್ ಬಳಗ ಮೊದಲು ಬ್ಯಾಟಿಂಗ್ ಮಾಡಿತು.

ಮೊದಲು ಬ್ಯಾಟಿಂಗ್ ಆರಂಭಿಸಿರುವ ಕಿವೀಸ್ ಪಡೆ ಭರ್ಜರಿ ಆರಂಭ ಪಡೆಯಿತು. ಕಿವೀಸ್ ಪರ ಆರಂಭಿಕರಾಗಿ ಕಣಕ್ಕಿಳಿದ ರಚಿನ್ ರವೀಂದ್ರ (37 ರನ್) ಮತ್ತು ವಿಲ್ ಯಂಗ್ (15 ರನ್) ಜೋಡಿ ಮೊದಲ ವಿಕೆಟ್ ಗೆ 57 ರನ್ ಗಳ ಭರ್ಜರಿ ಜೊತೆಯಾಟವಾಡಿತು.

ಭಾರತದ ಪ್ರಭಾವಿ ಬೌಲಿಂಗ್

ಆದರೆ ಈ ಹಂತದಲ್ಲಿ ದಾಳಿಗಿಳಿದ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ವಿಲ್ ಯಂಗ್ ರನ್ನು ಔಟ್ ಮಾಡಿ ಭಾರತಕ್ಕೆ ಮೊದಲ ಮುನ್ನಡೆ ತಂದಿತ್ತರು. ಬಳಿಕ 37 ರನ್ ಗಳಿಸಿ ಅಪಾಯಕಾರಿಯಾಗುತ್ತಿದ್ದ ರಚಿನ್ ರವೀಂದ್ರ ಕುಲದೀಪ್ ಯಾದವ್ ರ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ಬಳಿಕ ಕೇನ್ ವಿಲಿಯಮ್ಸನ್ ಕೂಡ ಕುಲದೀಪ್ ಯಾದವ್ ಗೆ ವಿಕೆಟ್ ಒಪ್ಪಿಸಿದರು.

ಕಿವೀಸ್ ಬ್ಯಾಟಿಂಗ್ ಬಲ ನೀಡಿದ ಮಿಚೆಲ್

ಈ ಹಂತದಲ್ಲಿ ಕ್ರೀಸ್ ಗೆ ಬಂದ ಡರಿಲ್ ಮೆಚೆಲ್ ಕಿವೀಸ್ ಬ್ಯಾಟಿಂಗ್ ಗೆ ಬಲ ತುಂಬಿದರು. 101 ಎಸೆತಗಳನ್ನು ಎದುರಿಸಿದ ಮಿಚೆಲ್ 3 ಬೌಂಡರಿ ಸಹಿತ 63 ರನ್ ಕಲೆಹಾಕಿದರು. ಅವರಿಗೆ ಟಾಮ್ ಲಾಥಮ್ (14 ರನ್) ಮತ್ತು ಗ್ಲೆನ್ ಫಿಲಿಪ್ಸ್ (34 ರನ್) ಉತ್ತಮ ಸಾಥ್ ನೀಡಿದರು. ಬಳಿಕ ಕ್ರೀಸ್ ಗೆ ಬಂದ ಬ್ರೇಸ್ ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಕಿವೀಸ್ 250ರ ಗಡಿ ದಾಟುವಂತೆ ನೋಡಿಕೊಂಡರು. ಬ್ರೇಸ್ ವೆಲ್ ಕೇವಲ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 3 ಬೌಂಡರಿ ಸಹಿತ ಅಜೇಯ 53 ರನ್ ಗಳಿಸಿದರು.

ಅಂತಿಮವಾಗಿ ನ್ಯೂಜಿಲೆಂಡ್ ತಂಡ ನಿಗಧಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251ರನ್ ಕಲೆಹಾಕಿ ಭಾರತಕ್ಕೆ ಗೆಲಲ್ಲು 252ರನ್ ಗಳ ಸವಾಲಿನ ಗುರಿ ನೀಡಿತು. ಇನ್ನು ಭಾರತದ ಪರ ವರುಣ್ ಚಕ್ರವರ್ತಿ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ, ಶಮಿ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!