ಎಸ್ ಶ್ರೀಶಾಂತ್ 
ಕ್ರಿಕೆಟ್

ಕೇರಳ ಕ್ರಿಕೆಟ್ ಸಂಸ್ಥೆ ವಿರುದ್ಧ ಹೇಳಿಕೆ: ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ 3 ವರ್ಷ ಅಮಾನತು

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ, ಶ್ರೀಶಾಂತ್ ಮತ್ತು ಫ್ರಾಂಚೈಸಿ ತಂಡಗಳಾದ ಕೊಲ್ಲಂ ಏರೀಸ್, ಅಲಪ್ಪುಳ ಟೀಮ್ ಲೀಡ್ ಮತ್ತು ಅಲಪ್ಪುಳ ರಿಪ್ಪಲ್ಸ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.

ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದಿಂದ ಸಂಜು ಸ್ಯಾಮ್ಸನ್ ಅವರನ್ನು ಹೊರಗಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಕ್ರಿಕೆಟ್ ಸಂಸ್ಥೆ (ಕೆಸಿಎ) ತನ್ನ ವಿರುದ್ಧ ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಟೀಂ ಇಂಡಿಯಾದ ಮಾಜಿ ವೇಗಿ ಎಸ್ ಶ್ರೀಶಾಂತ್ ಅವರನ್ನು ಮೂರು ವರ್ಷಗಳ ಕಾಲ ಅಮಾನತುಗೊಳಿಸಿದೆ.

ಏಪ್ರಿಲ್ 30 ರಂದು ಕೊಚ್ಚಿಯಲ್ಲಿ ನಡೆದ ವಿಶೇಷ ಜನರಲ್ ಬಾಡಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೆಸಿಎ ಹೇಳಿಕೆಯಲ್ಲಿ ತಿಳಿಸಿದೆ. ಶ್ರೀಶಾಂತ್ ಸದ್ಯ ಕೇರಳ ಕ್ರಿಕೆಟ್ ಲೀಗ್‌ನಲ್ಲಿನ ಫ್ರಾಂಚೈಸಿ ಕೊಲ್ಲಂ ಏರೀಸ್‌ನ ಸಹ-ಮಾಲೀಕರಾಗಿದ್ದಾರೆ.

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ, ಶ್ರೀಶಾಂತ್ ಮತ್ತು ಫ್ರಾಂಚೈಸಿ ತಂಡಗಳಾದ ಕೊಲ್ಲಂ ಏರೀಸ್, ಅಲಪ್ಪುಳ ಟೀಮ್ ಲೀಡ್ ಮತ್ತು ಅಲಪ್ಪುಳ ರಿಪ್ಪಲ್ಸ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.

'ನೋಟಿಸ್‌ಗಳಿಗೆ ಫ್ರಾಂಚೈಸಿ ತಂಡಗಳು ತೃಪ್ತಿಕರ ಪ್ರತಿಕ್ರಿಯೆಯನ್ನು ನೀಡಿರುವುದರಿಂದ ಅವರ ವಿರುದ್ಧ ಯಾವುದೇ ಮುಂದಿನ ಕ್ರಮ ಕೈಗೊಳ್ಳಲಾಗುವುದಿಲ್ಲ. ಆದರೆ, ತಂಡದ ನಿರ್ವಹಣೆಗೆ ಸದಸ್ಯರನ್ನು ನೇಮಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲು ಸಭೆ ನಿರ್ಧರಿಸಿತು' ಎಂದು ಹೇಳಿಕೆ ತಿಳಿಸಿದೆ.

ಸಂಜು ಸ್ಯಾಮ್ಸನ್ ಅವರ ಹೆಸರನ್ನು ಬಳಸಿಕೊಂಡು ಆಧಾರರಹಿತ ಆರೋಪಗಳನ್ನು ಮಾಡಿದ್ದಕ್ಕಾಗಿ ಅವರ ತಂದೆ ಸ್ಯಾಮ್ಸನ್ ವಿಶ್ವನಾಥ್ ಮತ್ತು ಇತರ ಇಬ್ಬರ ವಿರುದ್ಧ ಕಾನೂನಿನ ಮೂಲಕ ಪರಿಹಾರ ಪಡೆಯಲು ಸಾಮಾನ್ಯ ಸಭೆ ನಿರ್ಧರಿಸಿದೆ ಎಂದು ಅದು ಹೇಳಿದೆ.

ಮಲಯಾಳಂ ಟೆಲಿವಿಷನ್ ಚಾನೆಲ್‌ನಲ್ಲಿ ನಡೆದ ಪ್ಯಾನೆಲ್ ಚರ್ಚೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಸ್ಯಾಮ್ಸನ್‌ರನ್ನು ಕುರಿತು ನೀಡಿದ ಹೇಳಿಕೆಗಾಗಿ ಎರಡು ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದ ಭಾರತ ತಂಡದ ಭಾಗವಾಗಿದ್ದ ಶ್ರೀಶಾಂತ್‌ಗೆ ಕೆಸಿಎ ಶೋಕಾಸ್ ನೋಟಿಸ್ ನೀಡಿತ್ತು.

ಸ್ಯಾಮ್ಸನ್ ಅವರನ್ನು ಬೆಂಬಲಿಸಿದ್ದಕ್ಕಾಗಿ ನೋಟಿಸ್ ನೀಡಲಾಗಿಲ್ಲ ಆದರೆ, ಅಸೋಸಿಯೇಷನ್ ವಿರುದ್ಧ ತಪ್ಪುದಾರಿಗೆಳೆಯುವ ಮತ್ತು ಅವಹೇಳನಕಾರಿ ಕಾಮೆಂಟ್‌ಗಳಿಗಾಗಿ ನೋಟಿಸ್ ಜಾರಿಮಾಡಲಾಗಿತ್ತು ಎಂದು ಕೆಸಿಎ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ದೂರದರ್ಶನದ ಚರ್ಚೆಯ ಸಮಯದಲ್ಲಿ ಶ್ರೀಶಾಂತ್ ಅವರು ಸ್ಯಾಮ್ಸನ್‌ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು. ಸ್ಯಾಮ್ಸನ್ ಮತ್ತು ಇತರ ಕೇರಳ ಆಟಗಾರರನ್ನು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದರು. ಕೆಸಿಎ ವಿರುದ್ಧ ಆರೋಪಗಳನ್ನು ಮಾಡಿದ್ದರು.

ವಿಜಯ್ ಹಜಾರೆ ಟ್ರೋಫಿಗಾಗಿ ಕೇರಳ ತಂಡದಿಂದ ಸ್ಯಾಮ್ಸನ್ ಅವರನ್ನು ಕೈಬಿಟ್ಟಿದ್ದು ಭಾರತದ ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆಯ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದ್ದು, KCA ವಿರುದ್ಧ ಟೀಕೆಗಳು ಕೇಳಿಬಂದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT