ಮಿಚ್ ಓವನ್ 
ಕ್ರಿಕೆಟ್

IPL 2025: ಮ್ಯಾಕ್ಸ್‌ವೆಲ್ ಬದಲಿಗೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ಆಲ್‌ರೌಂಡರ್ ಕರೆತಂದ ಪಂಜಾಬ್ ಕಿಂಗ್ಸ್!

ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವು ಖರೀದಿಸಿತ್ತು.

ಮುಲ್ಲನ್‌ಪುರ: ಗಾಯದಿಂದಾಗಿ ಐಪಿಎಲ್ 2025ನೇ ಆವೃತ್ತಿಯ ಉಳಿದ ಪಂದ್ಯಗಳಿಂದ ಹೊರಗುಳಿದ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಪಂಜಾಬ್ ಕಿಂಗ್ಸ್ ತಂಡವು ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದ ಮತ್ತೋರ್ವ ಆಸ್ಟ್ರೇಲಿಯಾದ ಆಲ್‌ರೌಂಡರ್ ಅನ್ನು ಕರೆತಂದಿದೆ.

ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವು ಖರೀದಿಸಿತ್ತು. ಟೂರ್ನಿಯ ಆರಂಭದಿಂದಲೂ ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ, ಆಡಿರುವ ಏಳು ಪಂದ್ಯಗಳಲ್ಲಿ ಕೇವಲ 48 ರನ್‌ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಬದಲಿಗೆ ಆಸ್ಟ್ರೇಲಿಯಾದವರೇ ಆದ ಆಲ್‌ರೌಂಡರ್ ಮಿಚ್ ಓವನ್ ಅವರನ್ನು ತಂಡಕ್ಕೆ ಕರೆತರಲಾಗಿದೆ.

'ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಉಳಿದ ಪಂದ್ಯಗಳಿಂದ ಹೊರಗುಳಿದಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಪಂಜಾಬ್ ಕಿಂಗ್ಸ್ ತಂಡವು ಆಲ್‌ರೌಂಡರ್ ಮಿಚ್ ಓವನ್ ಅವರನ್ನು ಆಯ್ಕೆ ಮಾಡಿದೆ' ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.

14 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಬಲಗೈ ಬ್ಯಾಟ್ಸ್‌ಮನ್ ಮತ್ತು ಬಲಗೈ ವೇಗಿಯಾಗಿರುವ 23 ವರ್ಷದ ಓವನ್, ಶ್ರೇಯಸ್ ಅಯ್ಯರ್ ನೇತೃತ್ವದ ಫ್ರಾಂಚೈಸಿಯನ್ನು ಮೂರು ಕೋಟಿ ರೂ.ಗೆ ಸೇರಲಿದ್ದಾರೆ.

ಆಸ್ಟ್ರೇಲಿಯಾದ ತಾಸ್ಮೇನಿಯಾದ ಮಿಚ್ ಓವನ್ 34 ಟಿ20 ಪಂದ್ಯಗಳನ್ನು ಆಡಿದ್ದು, 646 ರನ್ ಗಳಿಸಿದ್ದಾರೆ. ಎರಡು ಶತಕಗಳು ಮತ್ತು 108 ಗರಿಷ್ಠ ಸ್ಕೋರ್ ಪಡೆದಿದ್ದಾರೆ. ಆಸ್ಟ್ರೇಲಿಯಾದ ಆಲ್‌ರೌಂಡರ್ ಟಿ20ಯಲ್ಲಿ 10 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ' ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel